More

    ಬೈಂದೂರಲ್ಲಿ ಬಹುಪಯೋಗಿ ಬಂದರು: ಕೇಂದ್ರ ಸಚಿವರಿಗೆ ಸಂಸದ ಮನವಿ ಸೇತುವೆ ನಿರ್ಮಾಣಕ್ಕೆ ಕೋರಿಕೆ

    ಗಂಗೊಳ್ಳಿ: ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವರಾದ ಸರ್ಬಾನಂದ ಸೋನಾವಾಲ ಅವರನ್ನು ದೆಹಲಿಯಲ್ಲಿ ಸೋಮವಾರ ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿ ಮನವಿ ಸಲ್ಲಿಸಿದರು.

    ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಗರಮಾಲಾ ಯೋಜನೆಯಲ್ಲಿ ಮಲ್ಟಿ ಪರ್ಪಸ್ ಹಾರ್ಬರ್ (ಬಹುಉಪಯೋಗಿ ಬಂದರು) ಹಾಗೂ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣದ ಬಗ್ಗೆ ಚರ್ಚೆ ನಡೆಸಿದ ಸಂಸದರು, ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ, ವಾಣಿಜ್ಯ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕ ಅವಕಾಶಗಳಿದ್ದು ಇಲ್ಲಿ ಮಲ್ಟಿ ಪರ್ಪಸ್ ಹಾರ್ಬರ್ ಸ್ಥಾಪನೆ ಮಾಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

    ಬೈಂದೂರು ವಿಧಾನಸಭಾ ವ್ಯಾಪ್ತಿಯ ಗಂಗೊಳ್ಳಿಯಿಂದ ಕುಂದಾಪುರಕ್ಕೆ ಸುಮಾರು 18 ಕಿ.ಮೀ ಸುತ್ತಿ ಬಳಸಿ ಬರಬೇಕಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರು ಮತ್ತು ವಾಣಿಜ್ಯ ಕೇಂದ್ರವಾದ ಕುಂದಾಪುರ ಸಂಪರ್ಕಿಸಲು ಸೇತುವೆ ನಿರ್ಮಿಸಿದಲ್ಲಿ ಗಂಗೊಳ್ಳಿಯಿಂದ ಕುಂದಾಪುರ ಬಹಳ ಹತ್ತಿರವಾಗಲಿದೆ. ಕಚೇರಿ, ಆಸ್ಪತ್ರೆ, ಮೀನುಗಾರಿಕಾ ಹಾಗೂ ಇನ್ನಿತರ ಅವಶ್ಯಕತೆ ಪೂರೈಸಲು ಸಹಕಾರಿಯಾಗಲಿದೆ. ಈ ಬಗ್ಗೆ ತುರ್ತು ಗಮನಹರಿಸಿ ಆದ್ಯತೆಯ ಮೇರೆಗೆ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣಕ್ಕೆ ಅನುಮೊದನೆ ದೊರಕಿಸಿಕೊಡಬೇಕೆಂದು ಸಂಸದರು ಒತ್ತಾಯಿಸಿದರು.
    ಕರ್ನಾಟಕದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದರಿ ಯೋಜನೆಗಳ ಬಗ್ಗೆ ಪತ್ರ ಬರೆದಿದ್ದು ಪಿಪಿಪಿ ಮಾದರಿಯಲ್ಲಿ ಮಲ್ಟಿಪರ್ಪಸ್ ಹಾರ್ಬರ್‌ನಿರ್ಮಿಸಲು ಶೀಘ್ರವಾಗಿ ಟೆಂಡರ್ ಕರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಿಸಲು ಆದಷ್ಟು ತ್ವರಿತವಾಗಿ ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸೋನಾವಾಲ ಅವರು, ಭರವಸೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts