ವೃತ್ತಿಪರ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

arji
Published on

ಕೋಟ: ಬಿದ್ಕಲ್ಕಟ್ಟೆ ಸರ್ಕಾರಿ ಐಟಿಐಯಲ್ಲಿ 2025-26ನೇ ಸಾಲಿನ ವಿವಿಧ ತಾಂತ್ರಿಕ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಇಲೆಕ್ಟ್ರಿಶಿಯನ್, ಇಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಎ.ಸಿ. ಮೆಕ್ಯಾನಿಕ್ ವೃತ್ತಿಗಳಿಗೆ ಬಾಕಿ ಉಳಿದಿರುವ ಕೆಲವೇ ಸೀಟುಗಳಿಗಾಗಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ, ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ನೇರ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಪ್ರಾಚಾರ್ಯರ ಕಚೇರಿ ಸಂಪರ್ಕಿಸುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ. ಹೆಚ್ಚಿನ ಮಾಹಿತಿಗೆ ಬಿದ್ಕಲ್‌ಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಲು ತಿಳಿಸಿದೆ. ಮೊಬೈಲ್.ನಂ: 8123730460.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net