More

    ತೋಟಗಾರಿಕೆ ತರಬೇತಿಗೆ ಅರ್ಜಿ

    ಮೈಸೂರು: ರಂಗಸಮುದ್ರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸುವ ತರಬೇತಿಗೆ ಆಭ್ಯರ್ಥಿಗಳನ್ನು ಆಯ್ಕೆ ಮಾಡಲು ವೇಳಾಪಟ್ಟಿಯನ್ನು ನೀಡಲಾಗಿದೆ.

    ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸದರಿ 10 ತಿಂಗಳ ತರಬೇತಿ ಕಾರ್ಯಕ್ರಮದ ಅವಧಿಯನ್ನು ಪರಿಷ್ಕರಿಸಲಾಗಿದೆ. ರೈತರ ಮಕ್ಕಳು, ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷ ಹಾಗೂ ಮಾಜಿ ಸೈನಿಕರಿಗೆ 33 ರಿಂದ 65 ವರ್ಷ ವಯಸ್ಸಿನ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

    ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಅಥವಾ https://horticulturedir.karnataka.gov.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಜೂನ್ 3 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂ. 0821-2977572 ಸಂಪರ್ಕಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts