

ಬೆಳ್ತಂಗಡಿ: ದ.ಕ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರಾವಕ ಬಂಧುಗಳ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಸೆ.21ರಂದು ಶ್ರೀ ಕ್ಷೇತ್ರ ಹೊಂಬುಜದ ಮಠದ ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಿ ಪ್ರೋತ್ಸಾಹಿಸಲಾಗುವುದು.
ಪ್ರಸ್ತುತ ವರ್ಷದಲಿ ಎಸ್.ಎಸ್.ಎಲ್.ಸಿ ಗಿಂತ ಮೇಲ್ಪಟ್ಟು ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಬಿಬಿಎಂ, ಇಂಜಿನಿಯರಿಂಗ್, ವೈದ್ಯಕೀಯ ಇನ್ನಿತರ ವ್ಯಾಸಂಗ ಮುಂದುವರಿಸುತ್ತಿರುವ ವಿದ್ಯಾರ್ಥಿಗಳು ಮಾತ್ರ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಕಚೇರಿಯಲ್ಲಿ ಅರ್ಜಿ ಪಡೆದು ಅರ್ಜಿಯೊಂದಿಗೆ ಪ್ರಸ್ತುತ ಕಲಿಯುತ್ತಿರುವ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣಪತ್ರ, ಕಳೆದ ವರ್ಷ ಕಲಿತು ಉತ್ತೀರ್ಣರಾದ ಬಗ್ಗೆ ಅಂಕಪಟ್ಟಿಯ ಯಥಾಪ್ರತಿ, ವಿದ್ಯಾರ್ಥಿಯ ಮನೆ ವಿಳಾಸ, ವಿದ್ಯಾರ್ಥಿಯ ಆಧಾರ್ ಪ್ರತಿ, ಸಂಪರ್ಕ ಸಂಖ್ಯೆ, ತಂದೆ ಮತ್ತು ತಾಯಿಯ ಹೆಸರು ನಮೂದಿಸಿ ಸಹಿಯೊಂದಿಗೆ ಆ.31ರ ಒಳಗೆ ಕೆ.ಜಯವರ್ಮ ರಾಜ್ ಬಳ್ಳಾಲ್, ಮ್ಯಾನೇಜಿಂಗ್ ಟ್ರಸ್ಟಿ, ಕೆಲ್ಲಗುತ್ತು ಸಬರಬೈಲು ದಿ.ಕಿನ್ಯಮ್ಮಯಾನೆ ಗುಣವತಿಯಮ್ಮ ಮೆಮೋರಿಯಲ್ ಟ್ರಸ್ಟ್ ಶ್ರೀ ರತ್ನತ್ರಯ ತೀರ್ಥ ಕ್ಷೇತ್ರ, ಜೈನ್‌ಪೇಟೆ ಬೆಳ್ತಂಗಡಿ-574214 ದ.ಕ ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು. ಮಾಹಿತಿಗಾಗಿ 08256-233577 ಅಥವಾ 9448180439 ಸಂಪರ್ಕಿಸಬಹುದು ಎಂದು ಮ್ಯಾನೇಜಿಂಗ್ ಟ್ರಸ್ಟಿ ಕೆ.ಜಯವರ್ಮರಾಜ್ ಬಳ್ಳಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.