ಜನವರೀಲಿ ರೇಷನ್​ಕಾರ್ಡ್​ಗೆ ಅರ್ಜಿ?

Ration Card
Published on

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುವ, ಬಾಕಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಆಹಾರ ಇಲಾಖೆ ಜ.10ರ ನಂತರ ಆರಂಭಿಸುವ ಸಾಧ್ಯತೆಯಿದೆ.

ಆಹಾರ ಸಚಿವ ಕೆ.ಗೋಪಾಲಯ್ಯ ಡಿಸೆಂಬರ್ 2ನೇ ವಾರದಲ್ಲಿ ಆರಂಭಿಸಲಾಗುವುದು ಎಂದಿದ್ದರು. ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇರುವುದರಿಂದ ನಿಲ್ಲಿಸಲಾಗಿದೆ. ಜನವರಿ 2ನೇ ವಾರದಲ್ಲಿ ಅನುಮತಿ ಸಿಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 35,56 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿತ್ತು. ಇದರಲ್ಲಿ 31,77 ಲಕ್ಷ ಅರ್ಜಿಗಳು ವಿಲೇವಾರಿಯಾಗಿದ್ದು, 3,78 ಲಕ್ಷ ಅರ್ಜಿಗಳು ಬಾಕಿ ಉಳಿದಿವೆ.

ಏನೇನು ದಾಖಲೆಗಳು ಬೇಕು?: ರೇಷನ್ ಕಾರ್ಡ್​ಗಾಗಿ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್, ವಾರ್ಷಿಕ ಆದಾಯ ಮತ್ತು ವಾಸ ಸ್ಥಳ ದೃಢೀಕರಣ ಪತ್ರ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net