

ಕಾಸರಗೋಡು: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ 2024-25ನೇ ಸಾಲಿನ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ವರ್ಷದ 4 ಮತ್ತು 7ನೇ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲಿ ಎ ಗ್ರೇಡ್ ಪಡೆದಿರಬೇಕು. ಪರಿಶಿಷ್ಟ ಜಾತಿ ದುರ್ಬಲ ವರ್ಗದ ವಿದ್ಯಾರ್ಥಿಗಳು ಬಿ ಗ್ರೇಡ್ ತನಕ ಅಂಕ ಪಡೆದವರು ಅರ್ಜಿ ಸಲ್ಲಿಸಬಹುದು. ಪಾಲಕರ ವಾರ್ಷಿಕ ಆದಾಯ 1 ಲಕ್ಷ ರೂ. ಮೀರಬಾರದು. ಅರ್ಜಿ ನಮೂನೆ ಪ್ರತಿ ಬ್ಲಾಕ್ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕಚೇರಿಯಲ್ಲಿ ಲಭ್ಯವಿದೆ. ಅರ್ಜಿದಾರರು ಮೂಲ ಪ್ರಮಾಣಪತ್ರಗಳ ಸಹಿತ ಅರ್ಜಿಗಳನ್ನು ನವೆಂಬರ್ 15ರೊಳಗೆ ಸಂಬಂಧಿಸಿದ ಬ್ಲಾಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿಯಲ್ಲಿ ಸಲ್ಲಿಸಬೇಕು. ಮಾಹಿತಿಗೆ 0499-4256162 ಸಂಪರ್ಕಿಸಲು ಸೂಚಿಸಲಾಗಿದೆ.