More

    2,500 ಬಿಎಂಟಿಸಿ ಕಂಡೆಕ್ಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ಬೆಂಗಳೂರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2,500 ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

    ಮಿಕ್ಕುಳಿದ ವೃಂದದ 2,286 ಹುದ್ದೆಗಳು ಮತ್ತು ಸ್ಥಳೀಯ ವೃಂದದ 214 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ದ್ವಿತೀಯ ಪಿಯುಸಿ, 12ನೇ ತರಗತಿ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮೊ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಪುರುಷರು 160 ಸೆಂ.ಮೀ. ಮತ್ತು ಮಹಿಳೆಯು 150 ಸೆಂ.ಮೀ ದೇಹದಾರ್ಢ್ಯತೆ ಹೊಂದಿರುವವರು ಅರ್ಜಿಸಲ್ಲಿಸಬಹುದು. ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಪಡೆದಿರುವವರು ಮಾತ್ರ ಆಯ್ಕೆ ಪರಿಶೀಲನೆಗೆ ಪರಿಗಣಿಸಲಾಗುವುದು.
    ಸಾಮಾನ್ಯ ವರ್ಗ 35, ಒಬಿಸಿ 38, ಪರಿಶಿಷ್ಟ ಜಾತಿ/ಪಂಗಡ 40 ಮತ್ತು ಮಾಜಿ ಸೈನಿಕರು, ಇಲಾಖೆ ಅಭ್ಯರ್ಥಿಗಳು 45 ವರ್ಷಗಳ ವಯೋಮಿತಿ ನಿಗದಿ ಮಾಡಿದೆ.

    ಮಾ.10ರಿಂದ ಏ.10ರೊಳಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು ಏ.13 ಕೊನೆಯ ದಿನವಾಗಿದೆ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 750 ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಠಿಠಿ://ಛಿ.ಚ್ಟ.್ಞಜ್ಚಿ.ಜ್ಞಿ ಗೆ ಭೇಟಿ ನೀಡಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts