More

    ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

    ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ 2024-25ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಎಐಸಿಟಿಇ ಅನುಮೋದಿತ ದೀರ್ಘಾವಧಿ ಕೋರ್ಸ್‌ಗಳಿಗೆ ನಗರದ ಕೆ.ಆರ್.ಎಸ್. ರಸ್ತೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಅರ್ಜಿ ಅಹ್ವಾನಿಸಲಾಗಿದೆ.
    ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೊಮಾ ಇನ್ ಪ್ರಿಸಿಷನ್ ಮಾನ್ಯುಫ್ಯಾಕ್ಟರಿಂಗ್ ಕೋರ್ಸ್‌ಗಳು ಈಗಾಗಲೇ ಪ್ರಾರಂಭವಾಗಿದೆ. ಈ ವರ್ಷ ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ ಕೋರ್ಸ್ ಪ್ರಾರಂಭಿಸಲಾಗಿದೆ. 3 ವರ್ಷದ ಕೋರ್ಸ್ ಜತೆಗೆ 1 ವರ್ಷ ಕಡ್ಡಾಯವಾಗಿ ಕೈಗಾರಿಕಾ ತರಬೇತಿ, ಕೋರ್ಸ್ ಮುಗಿದ ಬಳಿಕ ಉದ್ಯೋಗದ ನೆರವು ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ, ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದ ವಿದ್ಯಾರ್ಥಿವೇತನದ ಸೌಲಭ್ಯವಿರುತ್ತದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಪ್ರವೇಶಾತಿಯನ್ನು ಆನ್‌ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಾಗುತ್ತದೆ. ಆನ್‌ಲೈನ್ ಅರ್ಜಿಯನ್ನು ಮೇ 11 ರಿಂದ 27 ರವರೆಗೆ ಸಲ್ಲಿಸಬಹುದು. ಮಾಹಿತಿಗಾಗಿ ಸಹಾಯವಾಣಿ 155267, ಮೊ.9980557205 ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಾಂಶುಪಾಲ ಎಸ್.ಎನ್.ಜಗದೀಶ್ ಕುಮಾರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts