More

    ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

    ನಗರದ ನ್ಯೂ ಕಾಂತರಾಜ ಅರಸ್ ರಸ್ತೆಯ ಕುಂಬಾರರ ಸಾರ್ವಜನಿಕ ವಿದ್ಯಾರ್ಥಿನಿಲಯದ ಉಚಿತ ವಸತಿ ಸೌಕರ್ಯಕ್ಕಾಗಿ(2023-24ನೇ ಸಾಲಿಗೆ) ಕುಂಬಾರ ಜನಾಂಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


    ವಿದ್ಯಾರ್ಥಿ ನಿಲಯಕ್ಕೆ ಪದವಿ(ಬಿ.ಎಸ್ಸಿ., ಎಂ.ಎಸ್ಸಿ, ಬಿ.ಇ., ಎಂ.ಟೆಕ್., ಎಂಬಿಬಿಎಸ್) ಹಾಗೂ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಅರ್ಜಿ ನಮೂನೆ ಪಡೆದು, ಕಾಲೇಜಿನಲ್ಲಿ ವ್ಯಾಸಂಗ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ ಸೇರಿದಂತೆ ಎಲ್ಲ ದಾಖಲೆಗಳ ಜೊತೆಗೆ ಕಾಲೇಜಿನ ಗುರುತಿನ ಚೀಟಿ ಹಾಗೂ 2 ಭಾವಚಿತ್ರಗಳೊಂದಿಗೆ ಜು.30ರೊಳಗೆ ಅರ್ಜಿ ಸಲ್ಲಿಸಬೇಕು. ಕಳೆದ ವರ್ಷ ಪ್ರವೇಶ ಪಡೆದಿರುವ ಹಳೆಯ ವಿದ್ಯಾರ್ಥಿಗಳು ಸಹ ಈ ವರ್ಷದ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬೇಕು ಎಂದು ಟ್ರಸ್ಟ್‌ನ ಕಾರ್ಯದರ್ಶಿ ಟಿ.ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ಅರ್ಜಿಗಳನ್ನು ವಿದ್ಯಾರ್ಥಿನಿಲಯದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 96115 99514 ಸಂಪರ್ಕಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts