ಬೆಂಗಳೂರು ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಾಶಾಲಾ ಶಿಕ್ಷಕರಿಗೆ 2024-25ನೇ ಸಾಲಿನ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆಯು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿನಿದೆ.
ತರಗತಿ ಕೊಠಡಿಗಳಲ್ಲಿ ವಿಷಯ ಪಾಂಡಿತ್ಯದ ಜತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕ, ಉಪನ್ಯಾಸಕ, ಮುಖ್ಯ ಶಿಕ್ಷಕ ಮತ್ತು ಪ್ರಾಂಶುಪಾಲರನ್ನು ಗುರುತಿಸಲಾಗುತ್ತಿದೆ. ಅಂತಹ ಶಿಕ್ಷಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸೆ.5ರಂದು ನಡೆಯಲಿರುವ ರಾಷ್ಟ್ರ ಮತ್ತು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಸ್ತಿಗೆ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್‌ಲೈನ್ ಪೋರ್ಟಲ್‌ನಲ್ಲಿ ಠಿಠಿ:://ಠ್ಚಟಟ್ಝಛಿಛ್ಠ್ಚಠಿಜಿಟ್ಞ.ಚ್ಟ್ಞಠಿ.ಜಟ.ಜ್ಞಿ/ಛ್ಞಿ ರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸಂಪೂರ್ಣ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿಯೇ ನಡೆಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಇಲಾಖೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರುವ ಹಾಗೂ ಕಳೆದ 5 ವರ್ಷಗಳಿಂದ ಬೊಧಣೆ ಮಾಡುತ್ತಿರುವ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವೇಳಾಪಟ್ಟಿ‘
ಆ.16ರವರೆಗೆ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಅರ್ಜಿ ಸಲ್ಲಿಸಬಹುದು
ಆ.17ರಿಂದ 21 ತಾಲ್ಲೂಕು ಮಟ್ಟದ ಆಯ್ಕೆ ಸಮಿತಿಗಳಿಗೆ ನಿಗದಿಪಡಿಸಿರುವ ಅವಧಿ
ಆ.22ರಿಂದ 27 ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೆ ನಿಗದಿಪಡಿಸಿರುವ ಅವಧಿ
ಆ.28ರಿಂದ 30 ರಾಜ್ಯಮಟ್ಟದ ಆಯ್ಕೆ ಸಮಿತಿಗೆ ನಿಗದಿಪಡಿಸಿರುವ ಸಮಯ
ಆ.31 ಸರ್ಕಾರಕ್ಕೆ ವರದಿ ಸಲ್ಲಿಸುವುದು
ಸೆ.3 ಪ್ರಶಸ್ತಿ ವಿಜೇತರ ಮಾಹಿತಿ ನೀಡುವುದು
ಸೆ.5 ಪ್ರಶಸ್ತಿ ಪ್ರದಾನ