ಯುವ ಸಬಲೀಕರಣ ಇಲಾಖೆಯ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

Published on

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಜಿಮ್ ಫಿಟ್ನೆಸ್, ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ನ.28 ರಿಂದ ಡಿ.17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊಲಿಗೆ ತರಬೇತಿ ಶಿಬಿರವು ಕುಂಬಳಗೋಡು ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, 18 ರಿಂದ 30 ವರ್ಷ ವಯೋಮಿತಿಯುಳ್ಳ, ಎಸ್.ಎಸ್.ಎಲ್.ಸಿ (ಪಾಸ್/ಫೇಲ್) ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವೀಡಿಯೋಗ್ರಫಿ ತರಬೇತಿ ಶಿಬಿರವು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಮ್ ಫಿಟ್ನೆಸ್ ತರಬೇತಿ ಶಿಬಿರವು ಕುಂಬಳಗೋಡು ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಗೇಟ್ ನಂ.12, ಕೊಠಡಿ ಸಂಖ್ಯೆ: 17 ಮತ್ತು 18, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು-01 ಇಲ್ಲಿ ಖುದ್ದಾಗಿ ಬಂದು ನ.25 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ: 9731251411 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net