More

    ಅಲೆಮಾರಿ ನಿಗಮದಿಂದ ಅರ್ಜಿ ಆಹ್ವಾನ

    ಮಂಗಳೂರು: ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ ಜಿಲ್ಲೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು, ಇತರ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸತು), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ). ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜೀ, ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ನ.3ರೊಳಗೆ ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ www.kaad.karnataka.gov.in ಅಥವಾ 0824-2456544, 9148013035, 8618146685 ಸಂಪರ್ಕಿಸಬಹುದು ಎಂದು ಕೆಎಎಡಿಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts