ಯಾದಗಿರಿ : ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದು, 2025ರ ಜನವರಿ 26 ರಂದು ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಯಾದಗಿರಿ ಜಿಲ್ಲೆಯ ಆರೋಗ್ಯ, ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ, ಶಾಂತಿ ಸೌಹಾರ್ದತೆ, ಮತ್ತು ಕ್ರೀಡಾ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಆರೋಗ್ಯ, ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ, ಶಾಂತಿ ಸೌಹಾರ್ದತೆ, ಮತ್ತು ಕ್ರೀಡಾ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಷರತ್ತುಗಳು ಸ್ಥಳೀಯರಿಗೆ, ಹೊಸದಾಗಿರುವ ವ್ಯಕ್ತಿಗಳಿಗೆ ಮಾತ್ರ ಆದ್ಯತೆ ನೀಡಲಾಗುವುದು. (ಈ ಹಿಂದೆ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಸ್ವಿಕರಿಸಿದವರನ್ನು ಹೊರತುಪಡಿಸಿ), ಮಹಿಳೆಯರಿಗೆ, ಅಂಗವಿಕಲರಿಗೆ ಮೊದಲು ಪ್ರಾಧಾನ್ಯತೆ ನೀಡಲಾಗುವುದು. ಸಂಬAಧಿಸಿದ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರಬೇಕು. ಯಾವುದೇ ಸರ್ಕಾರಿ ನೌಕರರಾಗಿರಬಾರದು ಮತ್ತು ಯಾವುದೇ ಸರ್ಕಾರಿ ಅನುದಾನಿತ ಸ್ವಾಮ್ಯದ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವವಹಿಸುತ್ತಿರಬಾರದು. ಸರ್ಕಾರಿ ಇಲಾಖೆಗಳಿಂದ ಅನುದಾನಪಡೆದು ಕಾರ್ಯಕ್ರಮಗಳನ್ನು ಏರ್ಪಡಿಸಿರುವವರು ಇರಬಾರದು ಮತ್ತು ಸ್ವತಂತ್ರವಾಗಿ ಕಾರ್ಯಕ್ರಮವನ್ನು ರೂಪಿಸಿರಬೇಕು. ಜಿಲ್ಲಾಮಟ್ಟದ ಸಮಿತಿಯಿಂದ ಆಯ್ಕೆ ಮಾಡಲಾಗುವುದು ಈ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರಿಗೆ ನಿಗದಿತ ದಿನಾಂಕದ ಒಳಗೆ ಭೌತಿಕ ಪ್ರತಿ ಮೂಲಕ ಸಲ್ಲಿಸಲು ಸೂಚಿಸಿದೆ. (ಯಾವುದೇ ನಿಗದಿತ ಅರ್ಜಿ ನಮೂನೆ ಇರುವುದಿಲ್ಲ, ಮನವಿದಾರರು ಅರ್ಜಿಯೊಂದಿಗೆ ಸ್ವವಿವರದ (ಬಯೋಡೆಟಾ) ಪ್ರತಿ ಹಾಗೂ ಮಾಡಿರುವ ಸಾಧನೆ ಮತ್ತು ವಿಶೇಷ ಕಾರ್ಯಗಳ ಬಗೆಗಿನ ಮಾಹಿತಿ ಪ್ರತಿ ಸಹ ಲಗತ್ತಿಸಬೇಕು) 2025ರ ಜನವರಿ 23ರ ಒಳಗೆ ಅರ್ಜಿಸಲ್ಲಿಸಬೇಕು, ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಸಹಾಯಕ ನಿರ್ದೇಶಕರು ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.