More

    ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ; ಇಲ್ಲಿದೆ ವಿವರ..

    ಬೆಂಗಳೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (ಇಗ್ನೊ) 2023ನೇ ಸಾಲಿನ ವಿವಿಧ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ, ಪಿಜಿ ಡಿಪ್ಲೊಮಾ ಮತ್ತು ಪ್ರಮಾಣಪತ್ರ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

    ಎಐಷಿಟಿಇ ಪರಿಷ್ಕೃತ ನಿಯಮಗಳ ಪ್ರಕಾರ ಎಂಬಿಎ ಕೋರ್ಸ್‌ಗೆ ನೇರ ಪ್ರವೇಶ ಕಲ್ಪಿಸಲಾಗಿದೆ. ಅದೇ ರೀತಿ ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ, ಅಭಿವೃದ್ಧಿ ಪತ್ರಿಕೋದ್ಯಮ ಅತ್ಯಂತ ಉಪಯುಕ್ತ ಮತ್ತು ಉದ್ಯಮದ ಅಗತ್ಯವಿರುವ ಕಾರ್ಯಕ್ರಮಗಳನ್ನು ಇಗ್ನೊ ಆರಂಭಿಸಿದೆ ಎಂದು ಇಗ್ನೊ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ.ಎಸ್. ರಾಧಾ ತಿಳಿಸಿದ್ದಾರೆ.

    ಇದನ್ನೂ ಓದಿ: ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?

    ಪರಿಶಿಷ್ಟ ಜಾತಿ-ಪಂಗಡ ಮತ್ತು ಅಂಗವಿಕಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿಸಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಅಡಿ ಶುಲ್ಕ ವಿನಾಯಿತಿ ಪಡೆಯಬಹುದು.

    ಅಖಿಲ ಭಾರತ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವೇಳೆ ವಿದ್ಯಾಲಕ್ಷ್ಮಿ ಪೋರ್ಟಲ್ ಬಳಸಬಹುದಾಗಿದೆ. ಅರ್ಜಿ ಸಲ್ಲಿಸಲು https://ignouadmission.samarth.edu.in/ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ 9449337272 ಸಂಪರ್ಕಿಸಬಹುದು.

    ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts