ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021 ಹಾಗೂ 2022ನೇ ಸಾಲಿನಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ, ಪದಕ ವಿಜೇತರಾದಲ್ಲಿ ಕ್ರೀಡಾಪಟುಗಳಿಗೆ 50,000 ರೂ. ನಗದು ಪುರಸ್ಕಾರ ನೀಡಲಾಗುತ್ತದೆ. ಅರ್ಹ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ. ಗೇಟ್ ನಂ.12, ಕೊಠಡಿ ಸಂಖ್ಯೆ 17-18, ಶ್ರೀ ಕಂಠೀರವ ಕ್ರೀಡಾಂಗಣ, ಕಸ್ತೂರ್‌ಬಾ ರಸ್ತೆ, ಬೆಂಗಳೂರು-560001 ಇಲ್ಲಿ ಖುದ್ದಾಗಿ ನ.27ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ: 080-22239771 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.