More

    ತುಮಕೂರು ವಿವಿಯಲ್ಲಿ ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    ತುಮಕೂರು: ತುಮಕೂರು ವಿವಿ ಪಿಎಚ್‌ಡಿ ಪ್ರವೇಶಾತಿಗೆ ಬಡಿದಿದ್ದ ಗ್ರಹಣ ಬಿಡುಗಡೆಯಾಗಿದೆ. ಬರೋಬ್ಬರಿ ಎರಡೂವರೆ ವರ್ಷದ ನಂತರ ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಅಂತರ್ಜಾಲದಲ್ಲಿ ಫೆ.14ರಿಂದಲೇ ಅರ್ಜಿ ಲಭ್ಯವಿದ್ದು ಮಾ.10ರ ವರೆಗೂ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳಿಗೆ ಅವಕಾಶವಿದೆ. ಮಾ.16ರಂದು ಪ್ರವೇಶಾತಿ ಪರೀಕ್ಷೆ, 20ರಂದು ಫಲಿತಾಂಶ ಕೂಡ ಪ್ರಕಟವಾಗಲಿದ್ದು ಮಾ.31ರೊಳಗೆ ಎಲ್ಲ ಪ್ರಕ್ರಿಯೆಗಳು ಪೂರ್ಣವಾಗಲಿವೆ.

    ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಸಂಶೋಧನೆಯ ಕನಸು ಕಾಣುತ್ತಿದ್ದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಯುಯುಸಿಎಂಎಸ್ ತಂತ್ರಾಂಶ ದೋಷದ ನೆಪದಿಂದ ಪ್ರವೇಶಕ್ಕೆ ಅವಕಾಶವನ್ನೇ ನೀಡಿರಲಿಲ್ಲ. ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದ ಸಾವಿರಾರು ವಿದ್ಯಾರ್ಥಿಗಳು ಪಿಎಚ್‌ಡಿ ಪದವಿಗೆ ಅವಕಾಶ ಪಡೆಯಲು ಚಾತಕ ಪಕ್ಷಿಯಂತೆ ಕಾಯುತ್ತಿದ್ದರು.

    ಯುಜಿಸಿ ನಿಯಮದಂತೆ ಪ್ರತಿ ಆರು ತಿಂಗಳಿಗೊಮ್ಮೆ ವಿವಿಗಳಲ್ಲಿ ಸಂಶೋಧನೆಗಳಿಗೆ ಅರ್ಜಿ ಆಹ್ವಾನಿಸುವುದು ಕಡ್ಡಾಯವಾಗಿದೆ. ಆದರೆ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ತಂತ್ರಾಂಶದಲ್ಲಿನ ದೋಷ ರಾಜ್ಯದಲ್ಲಿ ಪಿಎಚ್‌ಡಿ ಪ್ರವೇಶವೇ ಸ್ಥಗಿತವಾಗಿಸಿತ್ತು.
    ಸಂಶೋಧನಾರ್ಥಿಗಳಿಲ್ಲದೆ ಮಾರ್ಗದರ್ಶಕರೂ ಕೂಡ ವಿವಿಗಳಲ್ಲಿ ಯುಜಿಸಿ ವೇತನ ಶ್ರೇಣಿ ವೇತನ ಪಡೆಯುವ ಪ್ರಾಧ್ಯಾಪಕರಾಗಿ ಖಾಲಿ ಕುಳಿತುಕೊಳ್ಳುವಂತಾಗಿತ್ತು.

    ಖಾಲಿ ಇರುವ ಸೀಟುಗಳಿಗೆ ಅರ್ಜಿ: 2022-23ನೇ ಸಾಲಿನ ಪೂರ್ಣಕಾಲಿಕ ಮತ್ತು ಅರೆಕಾಲಿಕ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕನ್ನಡ, ಇಂಗ್ಲಿಷ್, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ, ಸಮಾಜಕಾರ್ಯ, ಸಮಾಜಶಾಸ್ತ್ರ, ವಾಣಿಜ್ಯಶಾಸ್ತ್ರ, ವ್ಯವಹಾರ ನಿರ್ವಹಣೆ, ರಸಾಯನಶಾಸ್ತ್ರ, ಜೀವ ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತಶಾಸ್ತ್ರ, ಜೈವಿಕ ತಂತ್ರಜ್ಞಾನ, ಪ್ರಾಣಿಶಾಸ್ತ್ರ, ಸೂಕ್ಷ್ಮಜೀವಶಾಸ್ತ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪರಿಸರ ವಿಜ್ಞಾನ ಮತ್ತು ಗಣಕಯಂತ್ರ ವಿಭಾಗದಲ್ಲಿ ಖಾಲಿ ಇರುವ ಸೀಟುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿ ಆಯಾ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸಿ ಪಡೆಯಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts