More

    ಕೊಳವೆ ಬಾವಿ ನಿರ್ವಹಣೆಗೆ ‘ಎಐ’ ತಂತ್ರಜ್ಞಾನ ಅಳವಡಿಕೆ; ಬೆಂಗಳೂರು ಜಲಮಂಡಳಿಯಿಂದ ವಿನೂತನ ಕ್ರಮ

    ಬೆಂಗಳೂರು: ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಜಲಮಂಡಳಿ ಆರ್ಟಿಫಿಶಿಯಲ್​ ಇಂಟಲಿಜೆನ್ಸ್​ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ.

    ನಗರದ ಚಿನ್ನಪ್ಪ ಗಾರ್ಡನ್​ನಲ್ಲಿ ಸೋಮವಾರ ಕೊಳವೆ ಬಾವಿಗೆ ಅಳವಡಿಸಿರುವ ಎಐ ಮತ್ತು ಐಓಟಿ ತಂತ್ರಜ್ಞಾನದ ಪ್ರಾಯೋಗಿಕ ಪರೀಕ್ಷೆ ಪರಿಶೀಲಿಸಿ ಮಾತನಾಡಿದರು.

    ನಗರದಲ್ಲಿ 14 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೊಳವೆ ಬಾವಿಗಳ ಪಂಪ್​ ಸೆಟ್​ಗಳನ್ನು ಹೆಚ್ಚಿನ ಸಮಯ ಬಳಸುವುದು, ನೀರಿಲ್ಲದಿರುವುದು ತಿಳಿಯದೆ ಮೋಟಾರ್​ ಓಡಿಸುವುದರಿಂದ ಕೊಳವೆ ಬಾವಿಗಳು ರಿಪೇರಿಗೆ ಬರುತ್ತಿವೆ.

    ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಕೊಳವೆ ಬಾವಿಗಳನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಹಾಗೂ ಅವುಗಳ ಅನಗತ್ಯ ಬಳಕೆಯನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಜತೆಗೆ ಪದೇಪದೇ ಮೋಟಾರ್​ ಸುಟ್ಟು ಹೋಗುವುದನ್ನು ತಡೆಯಲು ಹಾಗೂ ನಿರ್ವಹಣೆ ವೆಚ್ಚವನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts