More

    ರಾಜ್ಯ ಒಕ್ಕಲಿಗರ ಸಂಘದ ಹೊಸ ಸದಸ್ಯತ್ವಕ್ಕೆ ಅರ್ಜಿ ಸ್ವೀಕಾರ ನಾಡಿದ್ದೇ ಶುರು; ಆನ್​​ಲೈನ್​ನಲ್ಲೂ ಅವಕಾಶ..

    ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘ ವತಿಯಿಂದ ಹೊಸ ಸದಸ್ಯತ್ವಕ್ಕಾಗಿ ಅರ್ಜಿ ಸ್ವೀಕಾರ ಪ್ರಕ್ರಿಯೆ ಶುಕ್ರವಾರ (ಫೆ.17) ಆರಂಭಗೊಳ್ಳಲಿದ್ದು, ಆನ್‌ಲೈನ್ ಮತ್ತು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

    ಬೆಂಗಳೂರು, ಮೈಸೂರು, ಮಂಡ್ಯ, ಹಾಸನ ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೊಡಗು ಡಿಸಿಸಿ ಬ್ಯಾಂಕ್‌ನ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಘದ ಸದಸ್ಯತ್ವದ ಅರ್ಜಿ ವಿತರಿಸಲಾಗುತ್ತದೆ. ಅರ್ಜಿ ಸ್ವೀಕರಿಸಿದ ದಿನಾಂಕದಿಂದ 30 ದಿನದೊಳಗೆ ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ಸೇರಿ ಅಗತ್ಯ ದಾಖಲೆಗಳೊಂದಿಗೆ ಆಯಾ ಬ್ಯಾಂಕಿಗೆ ಅರ್ಜಿ ಹಿಂದಿರುಗಿಸಬೇಕು.

    ಸಂಘದ ಸದಸ್ಯತ್ವ ನೀಡುವಂತೆ ಒಕ್ಕಲಿಗ ಸಮುದಾಯದಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಫೆ.17ರಿಂದ ಆ.31ರವರೆಗೆ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. 18 ವರ್ಷ ತುಂಬಿರುವ ಮತ್ತು ಅದಕ್ಕೂ ಮೇಲ್ಪಟ್ಟವರು 1,650 ರೂ. ಶುಲ್ಕ ಪಾವತಿಸಿ ಸದಸ್ಯತ್ವ ಪಡೆಯಬಹುದು.

    http://www.rvsmembership.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಡೆಬಿಟ್, ಕ್ರೆಡಿಟ್ ಕಾರ್ಡ್ ಮತ್ತ ನೆಟ್ ಬ್ಯಾಂಕಿಂಗ್‌ನಲ್ಲಿ ಶುಲ್ಕ ಪಾವತಿಸಬಹುದು. ವಿವರಕ್ಕಾಗಿ 080 26611031ಕ್ಕೆ ಸಂಪರ್ಕಿಸಬಹುದು.

    ಕೋವಿಡ್​ ತಡೆಯುವಲ್ಲಿ ಮಾಸ್ಕ್​ ನಿಜಕ್ಕೂ ಪರಿಣಾಮ ಬೀರಿದೆಯಾ?: ಇಲ್ಲಿದೆ ಅಧ್ಯಯನವೊಂದರ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts