ರಾಜ್ಯ ಸರ್ಕಾರದ ವಿರುದ್ಧ ನಾಲ್ವರಿಂದ ಸುಪ್ರೀಂಕೋರ್ಟ್​ಗೆ ಅರ್ಜಿ; ಶೀಘ್ರವೇ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು?

Supreme Court
Published on

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಲ್ವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಲಿದೆ. ಕೆಲವು ಜಾತಿಗಳಿಗೆ ಸಂಬಂಧಿತ ವಿಚಾರವಾಗಿ ಇಂಥದ್ದೊಂದು ಬೆಳವಣಿಗೆ ನಡೆದಿದೆ.

ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿದೆ. ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರ ಈ ಅರ್ಜಿ ಹಾಕಿದ್ದಾರೆ.

ಲಂಬಾಣಿ, ಭೋವಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕುವ ಸಂಬಂಧ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸುಪ್ರೀಂಕೋರ್ಟ್​ 2020ರಲ್ಲಿ ಸೂಚನೆ ನೀಡಿತ್ತು. ಅಲ್ಲದೆ ಜಾತಿಗಳನ್ನು ಎಸ್​ಸಿಯಿಂದ ಕೈ ಬಿಡುವ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿತ್ತು. ಆದರೆ ಈ ವರೆಗೂ ರಾಜ್ಯ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಕಳಿಸಿಲ್ಲ.

ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಈ ಕುರಿತಂತೆ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಕೂಡ ನಡೆದಿದೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ಹೈಕೋರ್ಟ್​​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net