ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿ 39 ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ಎರಡೂವರೆ ಸಾವಿರ ರೂ. ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‌ನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿ ಉತ್ತೀರ್ಣರಾಗಿರುವವರು ಜು.1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳ ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ–ಬೆಟಗೇರಿ, 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ 12, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ವೆಂಕಟಗಿರಿ 03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು 02 ಹೀಗೆ ಒಟ್ಟು 39 ಆಭ್ಯರ್ಥಿಗಳಿಗೆ ಅವಕಾಶವಿದೆ.
ಹೆಚ್ಚಿನ ವಿವರ ಮತ್ತು ಅರ್ಜಿಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ–ಬೆಟಗೇರಿ ದೂ: 9449162822 ಸಂಪರ್ಕಿಸಬಹುದು.