ಉಚಿತ ಲ್ಯಾಪ್‌ಟಾಪ್‌ಗೆ ಅರ್ಜಿ ಸಲ್ಲಿಸಿ: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಮಾತ್ರ

Laptop
Published on

ಮಂಡ್ಯ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ಪ್ರಥಮ/ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆ.15ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಕಾರ್ಮಿಕ ಅಧಿಕಾರಿ ಕಚೇರಿ, ಮಂಡ್ಯ ಉಪವಿಭಾಗ, 2ನೇ ಕ್ರಾಸ್, ಬಂದೀಗೌಡ ಬಡಾವಣೆ, ಮಂಡ್ಯ ಇವರನ್ನು ಹಾಗೂ ಆಯಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net