ಗೌಪ್ಯ ಸಹಾಯಕ ಹುದ್ದೆಗೆ ಅರ್ಜಿ

Published on

ಕಾಸರಗೋಡು: ಜಿಲ್ಲೆಯ ಹೊಸದುರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಾಸ್ಟ್ ಟ್ರಾೃಕ್ ವಿಶೇಷ ನ್ಯಾಯಾಲಯದಲ್ಲಿ ಖಾಲಿಯಿರುವ ಗೌಪ್ಯ ಸಹಾಯಕ ಗ್ರೇಡ್-2 ಖಾಲಿ ಇರುವ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ನಿವೃತ್ತ ನ್ಯಾಯಾಲಯ ಸಿಬ್ಬಂದಿ ಮತ್ತು ನಿವೃತ್ತ ಸರ್ಕಾರಿ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಎಸ್.ಸಿ ಮಾನದಂಡದನ್ವಯ ವಿದ್ಯಾರ್ಹತೆ ಮತ್ತು 5 ವರ್ಷದ ಕೆಲಸದ ಅನುಭವ ಅರ್ಹತೆಯಾಗಿದೆ. ನಿಗದಿತ ನಮೂನೆಯ ಅರ್ಜಿ, ವಯಸ್ಸು, ವಿದ್ಯಾರ್ಹತೆ ಮತ್ತು ಕೆಲಸದ ಅನುಭವ ಸಾಬೀತುಪಡಿಸುವ ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳ ಸಹಿತ ಜ.28ಕ್ಕೆ ಸಂಜೆ 5ರವರೆಗೆ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ನ್ಯಾಯಾಲಯ ಕಾಸರಗೋಡು 671123 ಎಂಬ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ದೂರವಾಣಿ ಸಂಖ್ಯೆ(04994 256390)ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net