More

    ಮಹದಾಯಿ ಯೋಜನೆ ಅನುಷ್ಠಾನಗೊಳಿಸಿ

    ಬೆಳಗಾವಿ: ಮಹದಾಯಿ ಯೋಜನೆ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಪದಾಧಿಕಾರಿಗಳ ನೇತೃತ್ವದಲ್ಲಿ ಕನ್ನಡ ಮತ್ತು ರೈತ ಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಕೇಂದ್ರ, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಕಲ್ಪಿಸುವ ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಉಭಯ ಸರ್ಕಾರಗಳು ವಿಫಲವಾಗಿವೆ. ಇದರಿಂದ ರೈತರಿಗೆ ಸಮಸ್ಯೆ ಉಂಟಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

    ಈಗಾಗಲೇ ಮಹದಾಯಿ ಯೋಜನೆ ಅನುಷ್ಠಾನ ಸಂಬಂಧ ತೀರ್ಪು ಬಂದು ಒಂದು ವರ್ಷ ಕಳೆದಿದೆ. ಆದರೆ, ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ 28 ಸಂಸದರು ಕೇಂದ್ರದಲ್ಲಿ ಮಹದಾಯಿ ವಿಷಯವನ್ನು ಪ್ರಸ್ತಾಪಿಸದೆ ನಿರ್ಲಕ್ಷೃ ಮಾಡುತ್ತಿದ್ದಾರೆ. ಹಾಗಾಗಿ ಯೋಜನೆ ವಿಳಂಬವಾಗುತ್ತಿದೆ.

    ಮಹದಾಯಿ ಯೋಜನೆಗಳಿಗಾಗಿ ದಶಕಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿರುವ ಹೋರಾಟಗಾರರ ಮೇಲೆ ಸರ್ಕಾರಗಳು ಉದ್ದೇಶಪೂರಕವಾಗಿ ಕೇಸ್ ದಾಖಲಿಸಿಕೊಂಡು ಬರುತ್ತಿವೆ. ರಾಜ್ಯ ಸರ್ಕಾರ ತಕ್ಷಣವೇ ಕೇಸ್ ವಾಪಸ್ ಪಡೆದುಕೊಳ್ಳಬೇಕು. ಜತೆಗೆ ಹೋರಾಟಗಾರರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
    ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ , ಜಿಪಂ ಸದಸ್ಯ ಶಂಕರ ಮಾಡಲಗಿ, ಚೂನಪ್ಪ ಪೂಜೇರಿ, ಸೋಮು ರೈನಾಪುರ, ರಾಘವೇಂದ್ರ ನಾಯಕ, ಜಯಶ್ರೀ ಗುರನ್ನವರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts