More

    ಜಲಜೀವನ ಮಿಷನ್ ಅನುಷ್ಠಾನಕ್ಕೆ ಮೆಚ್ಚುಗೆ

    ಧಾರವಾಡ: ಕೇಂದ್ರ ಸರ್ಕಾರದ ಬಹು ಮುಖ್ಯ ಯೋಜನೆಯಾಗಿದ ಜಲಜೀವನ ಮಿಷನ್ (ಜೆಜೆಎಂ)ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸ್ವಚ್ಚ ಭಾರತ ಮಿಷನ್, ನಿರಂತರ ವಿದ್ಯುತ್ ಯೋಜನೆ, ಸಂಸದರ ಆದರ್ಶ ಗ್ರಾಮ ಯೋಜನೆ, ಘನತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಾಪನೆ ಸೇರಿ ಇತರ ಗ್ರಾಮೀಣ ಅಭಿವೃದ್ಧಿ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

    ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಕಟಿಸಿರುವ ಪಂಚಾಯಿತಿ ಪ್ರಪಂಚ ಪುಸ್ತಕವನ್ನು ಸಚಿವರು ಬಿಡುಗಡೆಗೊಳಿಸಿದರು.

    ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಸಿ.ಎಂ. ನಿಂಬಣ್ಣವರ, ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಪಂ ಸಿಇಒ ಡಾ. ಸುಶೀಲಾ.ಬಿ., ಉಪವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ.ಬಿ., ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಇತರರು ಇದ್ದರು.

    ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ

    ಕೆಪಿಟಿಸಿಎಲ್ ಹಾಗೂ ನಬಾರ್ಡ್​ನಲ್ಲಿ ಅನುಷ್ಠಾನಗೊಳ್ಳುವ ಯೋಜನೆಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮಾಹಿತಿ ಇಲ್ಲವಾಗಿದೆ. ಹೀಗಾಗಿ ಯಾವ ಯೋಜನೆ ಎಷ್ಟು ಪ್ರಮಾಣದಲ್ಲಿ ಅನುಷ್ಠಾನಗೊಂಡಿದೆ ಎಂಬುದೇ ತಿಳಿಯುತ್ತಿಲ್ಲ. ಜನಪ್ರತಿನಿಧಿಗಳಿಗೆ ಇಲ್ಲದ ಮಾಹಿತಿ ಜನರಿಗೆ ಸಿಗುವುದು ಹೇಗೆ? ಎಂದು ಪ್ರಶ್ನಿಸಿದ ಸಚಿವ ಜೋಶಿ, ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರ ವಹಿಸಿ, ಎಲ್ಲ ಮಾಹಿತಿ ನೀಡುವಂತೆ ಸೂಚಿಸಿದರು.

    ಕಾಟಾಚಾರದ ಸಭೆ

    ಕರೊನಾ ಹಾವಳಿ ಹಿನ್ನೆಲೆಯಲ್ಲಿ ಬಹು ತಿಂಗಳ ಬಳಿಕ ನಡೆದ ದಿಶಾ ಸಭೆ ಕಾಟಾಚಾರಕ್ಕೆ ಎಂಬಂತಾಗಿತ್ತು. ಸಚಿವರು ದೆಹಲಿ ಪ್ರವಾಸ ಇದ್ದ ಕಾರಣ ಕೇವಲ ಒಂದು ತಾಸಿನಲ್ಲಿ ಸಭೆ ಪೂರ್ಣಗೊಳಿಸಿದರು. ಸಭೆ ಆರಂಭದಲ್ಲಿ ಕೆಲ ಯೋಜನೆಗಳ ಮಾಹಿತಿ ಪಡೆದು ತಮ್ಮ ಅಭಿಪ್ರಾಯ ಮಂಡಿಸಿದ ಸಚಿವರು, ಇಲಾಖಾ ವಾರು ಪ್ರಗತಿ ಪರಿಶೀಲನೆ ನಡೆಸಲಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts