More

    ಮೂರೂವರೆ ಸಾವಿರ ಕೋಟಿ ರೂ.ಹೂಡಿಕೆಗೆ ಅನುಮೋದನೆ; 10 ಸಾವಿರ ಜನರಿಗೆ ಉದ್ಯೋಗ ಸೃಷ್ಟಿ

    ಬೆಂಗಳೂರು: ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 3,607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
    ಧಾರವಾಡ, ರಾಯಚೂರು, ಯಾದಗಿರಿ, ಗದಗ ಸೇರಿದಂತೆ ಬೆಂಗಳೂರಿನಲ್ಲಿ ಈ ಹೂಡಿಕೆಗಳಾಗಲಿವೆ.
    ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಅಧ್ಯಕ್ಷತೆಯಲ್ಲಿ ಸಮಿತಿಯ 141ನೇ ಸಭೆ ಮಂಗಳವಾರ ನಡೆಯಿತು. 50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ 2,088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಇವುಗಳಿಂದ 6,360 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
    15 ಕೋಟಿ ರೂ.ಗಳಿಂದ 50 ಕೋಟಿ ರೂ.ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 941.40 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,395 ಜನರಿಗೆ ಉದ್ಯೋಗಗಳು ಲಭ್ಯವಾಗುವುದು.
    ಹೆಚ್ಚುವರಿ ಬಂಡವಾಳ ಹೂಡಿಕೆಯ ಮೂರು ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ.
    ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಂ. ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕ ಆರ್.ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts