More

    ಕಾಯ್ದೆ ಉಲ್ಲಂಸಿ ವಿನ್ಯಾಸ ಅನುಮೋದನೆ; ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

    ಬೆಂಗಳೂರು: ಯೋಜನಾ ಕಾಯ್ದೆ ಉಲ್ಲಂಘಿಸಿ ಗ್ರಾಪಂ/ನಗರ ಸ್ಥಳೀಯ ಸಂಸ್ಥೆಗಳಿಂದ ವಿನ್ಯಾಸ ಅನುಮೋದನೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

    ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಅನ್ನು ಉಲ್ಲಂಸಿ ವಿನ್ಯಾಸಗಳಿಗೆ ಅನುಮೋದನೆ ನೀಡುವ ಗ್ರಾಪಂ ಅಧಿಕಾರಿಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅಧಿಕಾರಿಗಳು/ನೌಕರರ ವಿರುದ್ಧ ನಗರಾಭಿವೃದ್ಧಿ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

    ಗ್ರಾಪಂಗಳು ತಮ್ಮಅಧಿಕಾರ ವ್ಯಾಪ್ತಿ ಇಲ್ಲದೇ ಇದ್ದರೂ ಸಹ ವಿನ್ಯಾಸಗಳಿಗೆ ಅನುಮೋದನೆ ನೀಡುತ್ತಿರುವುದು ಕಂಡು ಬಂದಿದೆ. ನಗರಾಭಿವೃದ್ಧಿ ಪ್ರಾಧಿಕಾರಗಳು, ಯೋಜನಾ ಪ್ರಾಧಿಕಾರಗಳನ್ನು ಹೊರತುಪಡಿಸಿ ಗ್ರಾಪಂಗಳು, ನಗರ ಸ್ಥಂಸ್ಥೆಗಳು ಅನುಮೋದನೆ ನೀಡತಕ್ಕದ್ದಲ್ಲ.

    ಸ್ಥಳೀಯ ಯೋಜನಾ ಪ್ರಾಧಿಕಾರ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು ಅಥವಾ ಅಧಿಕೃತ ಅಧಿಕಾರಿ ವಿನ್ಯಾಸ ಅನುಮೋದಿಸಲು ಸಕ್ಷಮ ಪ್ರಾಧಿಕಾರವಾಗಿರುತ್ತಾರೆ. ಇಂತಹ ಪ್ರದೇಶಗಳಲ್ಲಿ ಗ್ರಾಪಂಗಳು, ನಗರ ಸ್ಥಳೀಯ ಸಂಸ್ಥೆಗಳು ವಿನ್ಯಾಸ ಅನುಮೋದನೆ ನೀಡತಕ್ಕದ್ದಲ್ಲ ಎಂದು ಸೂಚಿಸಲಾಗಿದೆ.

    ಯೋಜನಾ ಪ್ರಾಧಿಕಾರ , ನಗರಾಭಿವೃದ್ಧಿ ಪ್ರಾಧಿಕಾರ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರು ಅಥವಾ ಅಧಿಕೃತ ಅಧಿಕಾರಿಯಿಂದ ವಿನ್ಯಾಸ ಅನುಮೋದಿಸಿರುವ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಖಾತೆಗಳನ್ನು ನೀಡತಕ್ಕದ್ದು. ಸ್ಥಳೀಯ ಯೋಜನಾ ಪ್ರದೇಶ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಕಾಯ್ದೆಯಲ್ಲಿನ ಅವಕಾಶಗಳನ್ನು ಉಲ್ಲಂಸಿದಲ್ಲಿ ಅದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವುದು ಗ್ರಾಪಂ ಮತ್ತು ಸ್ಥಳೀಯ ಸಂಸ್ಥೆಗಳ
    ಜವಾಬ್ದಾರಿಯಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts