ಸರ್ಕಾರಿ ನೌಕರರಿಗೆ ಹಣರಹಿತ ಚಿಕಿತ್ಸೆ

1 Min Read
ಸರ್ಕಾರಿ ನೌಕರರಿಗೆ ಹಣರಹಿತ ಚಿಕಿತ್ಸೆ

ಸಾಗರ: ಸರ್ಕಾರಿ ನೌಕರರಿಗೆ ಹಣರಹಿತ ಚಿಕಿತ್ಸೆ ಒದಗಿಸುವ ಯೋಜನೆಗೆ ಮುಂಬರುವ ಏಪ್ರಿಲ್​ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ 15 ಶಿಕ್ಷಕರಿಗೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಂಘದ ತಾಲೂಕು ಶಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದ ಅವರು, ಈವರೆಗೂ ಕೆಲವು ಕಾಯಿಲೆಗಳಿಗೆ ಮಾತ್ರ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಸಿಗುತ್ತಿತ್ತು. ಹೊಸ ಯೋಜನೆಯಲ್ಲಿ 600ಕ್ಕೂ ಹೆಚ್ಚು ಕಾಯಿಲೆಗಳ ಚಿಕಿತ್ಸೆಗೆ ಅವಕಾಶವಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘ ಶಿಕ್ಷಕರಿಗೆ ವಿಶೇಷ ಸವಲತ್ತು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕರೊನಾ ಸಂದರ್ಭದಲ್ಲಿ ಸರ್ಕಾರಿ ನೌಕರರ ಶೇ.40 ಸಂಬಳ ಹಿಡಿದುಕೊಳ್ಳಲು ಸರ್ಕಾರ ಮುಂದಾಗಿತ್ತು. ಆದರೆ ಸಂಘದಿಂದ ಸಿಎಂ ಭೇಟಿ ಮಾಡಿ ಸಂಬಳ ಹಿಡಿಯದಂತೆ ಮನವಿ ಮಾಡಲಾಯಿತು ಎಂದು ತಿಳಿಸಿದರು.

ಸಂಘದ ತಾಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಜಿ.ಬಸವರಾಜ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕುಮಾರ್, ಖಜಾಂಚಿ ವಿ.ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐ.ಪಿ.ಶಾಂತರಾಜ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮ.ಸ.ನಂಜುಂಡಸ್ವಾಮಿ, ಜಿ.ಬಿ.ರುದ್ರಪ್ಪ, ಆರ್.ಮೋಹನ್​ಕುಮಾರ್ ಇದ್ದರು.

See also  ಶತಮಾನ ಪೂರೈಸಿದ ಕಸಾಪ ಕನ್ನಡಿಗರ ಹೆಮ್ಮೆ
Share This Article