More

    ವೆಂಕಟೇಶ್ವರ ಮೂರ್ತಿಗೆ ಸಾಮೂಹಿಕ ಅರ್ಚನೆ

    ಅರಕಲಗೂಡು: ಪಟ್ಟಣದ ಪೇಟೆ ಶ್ರೀ ಪ್ರಸನ್ನ ನಂಜುಂಡೇಶ್ವರ, ಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ಶನಿವಾರ 7ನೇ ವರ್ಷದ ವೈಕುಂಠ ಏಕಾದಶಿ ಹಾಗೂ ಗೀತಾ ಕಾರ್ಯಕ್ರಮವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

    ಬೆಳಗ್ಗೆ ವೆಂಕಟೇಶ್ವರ ಮೂರ್ತಿಗೆ ತುಳಸಿ ದಳದಿಂದ ಸಾಮೂಹಿಕ ಲಕ್ಷಾರ್ಚನೆ ನಡೆಸಲಾಯಿತು. ದೊಡ್ಡಮಠದ ಮಠಾಧೀಶ ಮಲ್ಲಿಕಾರ್ಜುನ ಸ್ವಾಮೀಜಿ, ಬಸವಾಪಟ್ಟಣದ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಬಳಿಕ ಸೇವಾರ್ಥದಾರರಿಗೆ ಗೌರವ ಸಮರ್ಪಣೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಸಲಾಯಿತು. ಭಕ್ತರು ಸಪ್ತದ್ವಾರಗಳಲ್ಲಿ ತೆರಳಿ ದೇವರ ದರ್ಶನ ಪಡೆದರು. ದೇವಾಲಯ ಸಮಿತಿ ಅಧ್ಯಕ್ಷ ಎ.ಜಿ.ರಾಮನಾಥ್, ಕಾರ್ಯದರ್ಶಿ ಪಿ.ಡಿ.ರಾಜೇಂದ್ರ ಕುಮಾರ್, ಸಹಕಾರ್ಯದರ್ಶಿ ಪಿ.ಎಲ್.ಜಗದೀಶ್, ಖಜಾಂಚಿ ವಾಸವಾಂಬ ಗುಪ್ತ ಉಪಸ್ಥಿತರಿದ್ದರು.

    ಪಟ್ಟಣದ ಕೋಟೆ ಐತಿಹಾಸಿಕ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ ಅಭಿಷೇಕ, ಮಹಾಮಂಗಳಾರತಿ ನಡೆಸಲಾಯಿತು. ರಾತ್ರಿ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು. ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.

    ತಾಲೂಕಿನ ಹುಲಿಕಲ್ ಗ್ರಾಮದ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ರಥ ಬೀದಿಯಲ್ಲಿ ಉತ್ಸವ ನಡೆಸಲಾಯಿತು. ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದು ವೈಕುಂಠ ದ್ವಾರ ಪ್ರವೇಶಿಸಿ ಧನ್ಯತೆ ಮೆರೆದರು. ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts