More

    ಯೋಜನೆ ಸದ್ಬಳಕೆಯಾದರೆ ಉದ್ದೇಶ ಸಾರ್ಥಕ; ಸಾಂಸ್ಕೃತಿಕ ಸಂಘದ ನಿರ್ದೇಶಕಿ ಲೀಲಾ ಮಲ್ಲಿಕಾರ್ಜುನ ಕಾರಟಗಿ ಹೇಳಿಕೆ

    ಕ.ಕ. ಅಭಿವೃದ್ಧಿಗೆ 500 ಕೋಟಿ ರೂ. ಮೀಸಲು

    ಅರಕೇರಾ: ಸರ್ಕಾರಿ ಯೋಜನೆಗಳು ಸದ್ಬಳಕೆಯಾದಾಗ ಮಾತ್ರ ಅವುಗಳ ಉದ್ದೇಶ ಈಡೇರುತ್ತದೆ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನಿರ್ದೇಶಕಿ ಲೀಲಾ ಮಲ್ಲಿಕಾರ್ಜುನ ಕಾರಟಗಿ ಹೇಳಿದರು.

    ಶಾವಂತಗಲ್‌ನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ಆಂಜನೇಯ ದೇವಸ್ಥಾನದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 22 ಲಕ್ಷ ರೂ. ವೆಚ್ಚದ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರ 500 ಕೋಟಿ ರೂ. ಮೀಸಲಿಟ್ಟಿದೆ. ಸಂಘದ ಅಧ್ಯಕ್ಷ ರಾಜ್ಯಸಭೆಯ ಮಾಜಿ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಸಾಕಷ್ಟು ಯೋಜನೆ ಜಾರಿಗೆ ತರಲಾಗಿದೆ ಎಂದರು.

    ತಾಲೂಕು ಸಂಚಾಲಕ ಶರಣು ಹುಣಸಿಗಿ ಮಾತನಾಡಿ, ಈಗಾಗಲೇ ಕಲ್ಯಾಣ ಕರ್ನಾಟಕ ಸಂಘದಿಂದ ಜೇನು, ಹಸು, ಮೇಕೆ ಸಾಕಣೆ, ಜೀವಾಮೃತ ತಯಾರಿ ಸೇರಿ ವಿವಿಧ ಯೋಜನೆಗಳು ಜಾರಿಯಲ್ಲಿವೆ. ಇವುಗಳಿಂದ ಈ ಭಾಗದ ರೈತರು ಆರ್ಥಿಕವಾಗಿ ಸದೃಢರಾಗಲು ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಹೊಲಿಗೆ ತರಬೇತಿ ಕೇಂದ್ರ ಹಾಗೂ ಪ್ರತಿಭಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಇದರಿಂದ ಗ್ರಾಮೀಣ ಪ್ರದೇಶ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದರು.

    ತಾಲೂಕು ಪ್ರತಿನಿಧಿಗಳಾದ ಬಸವಲಿಂಗಯ್ಯ ಸ್ವಾಮಿ ಹಿರೇಮಠ, ಶಂಕ್ರಪ್ಪ ಹಾಗೂ ಗ್ರಾಪಂ ಸದಸ್ಯರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts