More

    ಸುಭದ್ರ ದೇಶ ನಿರ್ಮಾಣಕ್ಕೆ ಮತ ಚಲಾಯಿಸಿ

    ಅರಕೇರಾ: ಪ್ರಜಾಪ್ರಭುತ್ವದಲ್ಲಿ ಸೂಕ್ತ ಪ್ರತಿನಿಧಿಯನ್ನು ಆಯ್ಕೆ ಮಾಡುವುದಕ್ಕೆ ಪ್ರತಿಯೊಬ್ಬರಿಗೂ ಮತದಾನದ ಶಕ್ತಿಯನ್ನು ಸಂವಿಧಾನ ನೀಡಿದೆ ಎಂದು ಪಿಡಿಒ ವೆಂಕೋಬ ನಾಯಕ ಹೇಳಿದರು.

    ಪಟ್ಟಣದ ಗಾಂಧಿ ವೃತ್ತದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಪಂ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸಹಯೋಗದಲ್ಲಿ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನದಲ್ಲಿ ಗುರುವಾರ ಮಾತನಾಡಿದರು.

    ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ಸುಭದ್ರ ದೇಶ ನಿರ್ಮಾಣಕ್ಕೆ ಪ್ರತಿಯೊಬ್ಬರು ಮತ ಚಲಾಯಿಸಬೇಕು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿಕೊಂಡು ಭವಿಷ್ಯದ ಆರೋಗ್ಯವಂತ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕಾರಣವಾಗಬೇಕು ಎಂದರು.
    ಕಂದಾಯ ನಿರೀಕ್ಷಕ ಉಮಾಶಂಕರ ಮಾತನಾಡಿ, ಮತದಾನ ಶೇ.100 ಗುರಿ ಸಾಧಿಸಬೇಕು. ಮಹಾನಗರಗಳಿಗೆ ದುಡಿಯಲು ಗುಳೆ ಹೋದವರು ಮತದಾನದಿಂದ ತಪ್ಪಿಸಿಕೊಳ್ಳದಂತೆ ಕರೆ ನೀಡಬೇಕು. ಯಾವುದೇ ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸುವುದು ಆದ್ಯ ಕರ್ತವ್ಯ. ಮತದಾನದಿಂದ ಯಾರೂ ದೂರ ಉಳಿಯಬಾರದು ಎಂದರು.

    ಪ್ರಮುಖರಾದ ಶಿಶು ಅಭಿವೃದ್ಧಿ ಯೋಜನೆ ಹಿರಿಯ ಮೇಲ್ವಿಚಾರಕಿ ಕಮಲಾಕ್ಷಿ, ಎನ್‌ಆರ್‌ಎಲ್‌ಎಂ ತಾಲೂಕು ಸಂಯೋಜಕ ಭೀಮರಾಯ, ಸಮುದಾಯ ಆರೋಗ್ಯ ಕೇಂದ್ರದ ಎಫ್‌ಡಿಸಿ ಅಣಿಜಪ್ಪ, ಸಿಆರ್‌ಪಿ ಬಸವರಾಜ, ಗ್ರಾಮ ಲೆಕ್ಕಾಧಿಕಾರಿಗಳಾದ ಬಸವರಾಜ ಹೂನೂರು, ಕೆಂಚಬಸ್ಸಪ್ಪ, ಮುಖ್ಯ ಶಿಕ್ಷಕ ದೇವಿಂದ್ರಪ್ಪ, ಗ್ರಾಪಂ ಕಾರ್ಯದರ್ಶಿ ಯಮುನಪ್ಪ ಕುಂಬಾರ, ಕರ ವಸೂಲಿಗಾರ ಇಬ್ರಾಹೀಂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts