More

    ಸಿದ್ದರಾಮಯ್ಯ, ಡಿಕೆಶಿ ನಡುವೆ ಇಲ್ಲ ಭಿನ್ನಾಭಿಪ್ರಾಯ

    ಬೆಳಗಾವಿ: ಬೆಳಗಾವಿ ಪಾಲಿಕೆ ಚುನಾವಣೆಗೆ ಪಕ್ಷದ ಚಿಹ್ನೆ ಬಳಸಿ ಸ್ಪರ್ಧಿಸಲು ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಈ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಕಾಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಚುನಾವಣೆ ಎದುರಿಸುವ ಕುರಿತು 10 ಜನರ ಕಮಿಟಿ ರಚಿಸಲಾಗಿದೆ. ಒಂದು ಬಾರಿ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಕೆಲವರು ಪಕ್ಷದ ಚಿಹ್ನೆಯಡಿ ಸ್ಪರ್ಧಿಸುವುದು ಬೇಡ ಎಂದಿದ್ದಾರೆ. ಗೊಂದಲ ಉಂಟಾಗಿದ್ದರಿಂದ ಪಕ್ಷದ ಪ್ರಮುಖ ಮುಖಂಡರಿಗೆ ಮಾಹಿತಿ ನೀಡಲಾಗಿದೆ ಎಂದರು. ಕಾಂಗ್ರೆಸ್‌ನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಪಕ್ಷ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಶಾಸಕರು ಮತ್ತು ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆಯೇ ಸದ್ಯ ಅಪ್ರಸ್ತುತ ಎಂದು ಸತೀಶ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ನಮ್ಮೊಂದಿಗೇ ಇರುತ್ತಾರೆ. ಈಗಾಗಲೇ ಅವರೊಂದಿಗೆ ಚರ್ಚೆ ಮಾಡಿದ್ದು, ಪಕ್ಷ ಬಿಟ್ಟು ಹೋಗುವುದಿಲ್ಲ. ಅವರು ಪಕ್ಷದೊಳಗಿನ ಕೆಲ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಅವುಗಳನ್ನು ಸರಿಪಡಿಸುವ ಪ್ರಯತ್ನ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts