ಶಿಗ್ಗಾಂವಿ: ವಕ್ಪ್ ಸಚಿವ ಜಮೀರ್ ಅಹಮದ್ ವಕ್ಪ್ ಆಸ್ತಿ ವಿಚಾರದಲ್ಲಿ ನಿರ್ಧಾರ ಮಾಡುವಾಗ ಉಳಿದ ಸಚಿವರು ಕತ್ತೆ ಕಾಯುತ್ತಿದ್ದರಾ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದ್ದಾರೆ.
ಶಿಗ್ಗಾಂವಿ ತಾಲೂಕಿನ ಬನ್ನೂರು ಗ್ರಾಮದಲ್ಲಿ ಅವರು ಮಾತನಾಡಿದರು.
ಅಧಿಕಾರಿಗಳ ಮೇಲೆ ಕಿರುಕುಳ ಹೆಚ್ಚಾಗಿದೆ. ಇವರು ವಾಲ್ಮೀಕಿ ಹಗರಣ ಮಾಡಿದ್ದಕ್ಕೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ. ಈಗ ಮತ್ತೊಬ್ಬ ಅಧಿಕಾರಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಿನ ಬೆಳಗಾದರೆ ಸಚಿವರು ಲೂಟಿ ಮಾಡುತ್ತಿದ್ದಾರೆ. ಇವರು ಲೂಟಿ ಮಾಡುತ್ತಿರುವುದರಿಂದ ಅಧಿಕಾರಿಗಳು ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಟೀಕಿಸಿದರು.
ವಾಲ್ಮೀಕಿ ನಿಗಮದ ಹಣವನ್ನು ರಾಜಾರೋಷವಾಗಿ ಲೂಟಿ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಹಣ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಿದ್ದಾರೆ. ವಾಲ್ಮೀಕಿ ಹಣ ಲೂಟಿ ಹೊಡೆಯುವಾಗ ಸರ್ಕಾರದಲ್ಲಿರುವ ಸಚಿವರು ನಿದ್ದೆಯ ಮಂಪರಿನಲ್ಲಿದ್ದರೆ ಎಂದು ಪ್ರಶ್ನಿಸಿದರು.