More

    ಮುಕ್ತವಾಗಿ ಚರ್ಚಿಸಿದರೆ ಸಮಸ್ಯೆಗಳಿಗೆ ಪರಿಹಾರ

    ಬೇಲೂರು: ಪ್ರತಿ ತಿಂಗಳು ಪೊಲೀಸ್ ಠಾಣೆಯಲ್ಲಿ ಸಭೆ ನಡೆಸಲಾಗುತ್ತಿತ್ತು. ಆದರೆ ಕೆಲ ಮುಖಂಡರು ಗ್ರಾಮಗಳಲ್ಲೇ ಕುಂದುಕೊರತೆ ಸಭೆ ನಡೆಸುವಂತೆ ಮನವಿ ಮಾಡಿದ್ದರಿಂದ ಗ್ರಾಮೀಣ ಮಟ್ಟದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಅರೇಹಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಲಿಂಗರಾಜು ಹೇಳಿದರು.

    ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಾವರ ಗ್ರಾಮದ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಹಲವಾರು ಸಮಸ್ಯೆಗಳಿದ್ದು, ಇವುಗಳ ಬಗ್ಗೆ ಮುಕ್ತವಾಗಿ ಚರ್ಚಿಸಿದಾಗ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ. ಮಹಿಳೆಯರು ತಮಗಾಗುತ್ತಿರುವ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸಮಸ್ಯೆಗಳಿಗೆ ಪೊಲೀಸ್ ಠಾಣೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವುದರಿಂದ ಯಾರೂ ಭಯಪಡಬಾರದು ಎಂದರು.

    ಬಾಲ್ಯ ವಿವಾಹವನ್ನು ಸಂಪೂರ್ಣ ನಿಷೇಧಿಸಿರುವುದರಿಂದ ಅದನ್ನು ಪ್ರೋತ್ಸಾಹಿಸುವ ಪಾಲಕರು ಜೈಲು ಪಾಲಾಗುವ ಸಾಧ್ಯತೆ ಇದೆ. ಇದಲ್ಲದೆ ಅವಶ್ಯಕತೆ ಇದ್ದಷ್ಟು ಮಾತ್ರ ಮೊಬೈಲ್ ಬಳಕೆ ಮಾಡಬೇಕು. ನಿಮ್ಮ ಮೊಬೈಲ್‌ಗೆ ಬರುವ ಒಟಿಪಿಯನ್ನು ಯಾರೊಂದಿಗೂ ಹಂಚಿ ಕೊಳ್ಳಬಾರದು. ಏನೇ ಸಮಸ್ಯೆಗಳಿದ್ದರೂ ನೇರವಾಗಿ ಪೊಲೀಸ್ ಠಾಣೆಗೆ ಬಂದು ನಮ್ಮೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಿ ಕೊಳ್ಳಬಹುದಾಗಿದೆ ಎಂದು ತಿಳಿಸಿದರು.
    ಅಪರಾಧ ವಿಭಾಗದ ಪಿಎಸ್‌ಐ ಸರ್ದಾರ್ ಪಾಷಾ, ಗ್ರಾಮಸ್ಥರಾದ ಕೆ.ಎಂ.ಕುಮಾರ್, ಪಾಪಾಚಾರಿ, ಗೀತಾ, ಗೌರಮ್ಮ, ಪುಟ್ಟಮ್ಮ, ಸಣ್ಣಯ್ಯ, ಭಾಗ್ಯಮ್ಮ, ಶಾರದಮ್ಮ, ಸವಿತಾ, ಸುಶೀಲಾ, ಶಿವಪ್ಪ, ರಂಜಿತ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts