ನ್ಯಾಯಾಲಯದಲ್ಲಿ ಸ್ಟೇ ತಂದ ಬಾಂಬೆ ಬಾಯ್ಸ್ ಅವರದೇ ಪಕ್ಷದವರಲ್ಲವೇ?: DK ಶಿವಕುಮಾರ್ ವಾಗ್ದಾಳಿ

blank

ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ” ಎಂದು ಡಿಸಿಎಂ dk ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿಯ 18 ಶಾಸಕರು 6 ತಿಂಗಳು ಅಮಾನತು; ಸ್ಪೀಕರ್​ ಆದೇಶ | Suspended

ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದರು. “ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?” ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:Share Market ; 5ನೇ ದಿನವೂ ಮುಂದುವರೆದ ಗೂಳಿ ಓಟ: ಇಂದಿನ ಲಾಭ-ನಷ್ಟಗಳಿಸಿದ ಷೇರುಗಳು ಪಟ್ಟಿ ಇಲ್ಲಿದೆ..

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, “ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು” ಎಂದು ವ್ಯಂಗವಾಡಿದರು.

ಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿಯ 18 ಶಾಸಕರು 6 ತಿಂಗಳು ಅಮಾನತು; ಸ್ಪೀಕರ್​ ಆದೇಶ | Suspended

 

Share This Article

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…