ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಲು ಪೂರಕ : ಸಂತೋಷ್ ಮಣಿಯಾಣಿ ಮೆಚ್ಚುಗೆ

New Project (27)
Published on

ಪುತ್ತೂರು ಗ್ರಾಮಾಂತರ: ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವಲ್ಲಿ ಕಸಾಪ ‘ಗ್ರಾಮ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ಪೂರಕವಾಗಿದೆ ಎಂದು ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ಹೇಳಿದರು.

ಅರಿಯಡ್ಕ ಪಾಪೆಮಜಲು ಸರ್ಕಾರಿ ಪ್ರೌಢಶಾಲೆಯಲ್ಲಿ ದ.ಕ. ಜಿಲ್ಲಾ ಕಸಾಪ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಅರಿಯಡ್ಕ ಗ್ರಾಪಂ ಹಾಗೂ ಶಾಲೆಯ ಸಹಕಾರ ಮತ್ತು ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಮಿತ್ರಂಪಾಡಿ ಜಯರಾಮ ರೈ ಪೋಷಕತ್ವದಲ್ಲಿ ನಡೆದ ‘ಗ್ರಾಮ ಸಾಹಿತ್ಯ ಸಂಭ್ರಮ’ ಉದ್ಘಾಟಿಸಿ ಮಾತನಾಡಿದರು.

ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿದರು. ಕಾವು ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ್ತ ಮೂಡಿತ್ತಾಯ ಸಾಧಕರನ್ನು ಸನ್ಮಾನಿಸಿದರು.

ಪಾಪೆಮಜಲು ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ರಕ್ಷಾ ಸರ್ವಾಧ್ಯಕ್ಷತೆ ವಹಿಸಿದರು. ಕಸಾಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪಾಪೆಮಜಲು ಪ್ರೌಢಶಾಲೆ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರು, ಕಸಾಪ ಹೋಬಳಿ ಘಟಕ ಅಧ್ಯಕ್ಷ ಕಡಮಜಲು ಸುಭಾಷ್ ರೈ ಮಾತನಾಡಿದರು.

ಮುಖ್ಯಶಿಕ್ಷಕ ಮೋನಪ್ಪ ಬಿ.ಪೂಜಾರಿ ಸ್ವಾಗತಿಸಿದರು. ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕ ನಾರಾಯಣ ಕುಂಬ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಜಗದೀಶ್ ಬಾರಿಕೆ ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯೆ ಆಶಾ ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಬಳಗದ ನಿರ್ವಾಹಕ ಅಪೂರ್ವ ಕಾರಂತ್ ವಂದಿಸಿದರು.

11 ಸಾಧಕರಿಗೆ ಸನ್ಮಾನ

ಅರಿಯಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿಕ್ಕಪ್ಪ ನಾಯ್ಕ ಅರಿಯಡ್ಕ, ಡಿ.ಅಮ್ಮಣ್ಣ ರೈ ಪಾಪೆಮಜಲು, ತೆರೆಜ್ ಎಂ.ಸಿಕ್ವೇರಾ, ಗುಂಡ್ಯಡ್ಕ ವಾಸು ಪೂಜಾರಿ, ತಿಲಕ್ ರೈ ಕುತ್ಯಾಡಿ, ನಾರಾಯಣ ಸುವರ್ಣ, ಜಗನ್ನಾಥ ಅರಿಯಡ್ಕ, ಗೀತಾ ಬಳ್ಳಿ ಕಾನ, ಕಾವು ದಿವ್ಯನಾಥ ಶೆಟ್ಟಿ, ಅಮ್ಮು ಪೂಂಜ, ಚಂದು ಮೂಲ್ಯ, ಜಯಪ್ರಕಾಶ್ ಅವರನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net