ಸರ್ಜಾ ಮೀಟೂ ಪ್ರಕರಣ: ನ.9ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬಹುಭಾಷಾ ನಟ‌ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್​ ಸರ್ಜಾ ಸಲ್ಲಿಸಿದ್ದ ಅರ್ಜಿ​ ವಿಚಾರಣೆಯನ್ನು ನವೆಂಬರ್​ 9ಕ್ಕೆ ನ್ಯಾಯಾಲಯ ಮುಂದೂಡಿದೆ.

ಮೆಯೋಹಾಲ್​ನ 22ನೇ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ನಡೆಯಬೇಕಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಮುಂದೂಡಿದ್ದು, ಸರ್ಜಾ‌ ಪರ‌ ವಕೀಲರು ಕಾಲಾವಕಾಶಕ್ಕೆ ಮನವಿ ಮಾಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಕಬ್ಬನ್​ ಪಾರ್ಕ್​ ಪೊಲಿಸ್​ ಠಾಣೆಯಲ್ಲಿ ಅರ್ಜುನ್​ ಸರ್ಜಾ ವಿರುದ್ಧ ಶ್ರುತಿ ಹರಿಹರನ್​ ದಾಖಲಿಸಿರುವ ಎಫ್​ಐಆರ್​ ರದ್ದು ಕುರಿತ ಅರ್ಜಿ ವಿಚಾರಣೆಯೂ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್)