More

    ಪದಾರ್ಪಣೆ ಪಂದ್ಯದಲ್ಲೇ ವಿಶಿಷ್ಟ ದಾಖಲೆ ಬರೆದ ಅರ್ಜುನ್ ತೆಂಡೂಲ್ಕರ್‌! ಯಾವುದು ಆ ದಾಖಲೆ?

    ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಲ್ಕತಾ ನೈಟ್​​ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಸುದೀರ್ಘ ಎರಡು ವರ್ಷಗಳ ಕಾಯುವಿಕೆ ಕೊನೆಗೊಂಡಿದೆ.

    2021ರ ಐಪಿಎಲ್​ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಪಾಲಾಗಿದ್ದರು. ಆಲ್​​ರೌಂಡರ್ ಆಗಿರುವ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್‌ ಶರ್ಮಾ ಅವರಿಂದ ಕ್ಯಾಪ್‌ ಸ್ವೀಕರಿಸಿದ್ದು, ತಮ್ಮ ಚೊಚ್ಚಲ ಪಂದ್ಯದಲ್ಲಿ ಎರಡು ಓವರ್ ಬೌಲಿಂಗ್ ಮಾಡಿದ್ದಾರೆ.

    ಇದನ್ನೂ ಓದಿ: ಕರೊನಾದಿಂದ ಮೃತಪಟ್ಟಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಪ್ರತ್ಯಕ್ಷನಾದ!

    ಚೊಚ್ಚಲ ಪಂದ್ಯದಲ್ಲೇ ದಾಖಲೆ…

    ಚೊಚ್ಚಲ ಪಂದ್ಯದಲ್ಲೇ ಅರ್ಜುನ್ ತೆಂಡೂಲ್ಕರ್ ವಿಶಿಷ್ಟ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ಐಪಿಎಲ್​ ಇತಿಹಾಸದಲ್ಲಿ ತಂದೆ ಮತ್ತು ಮಗ ಒಂದೇ ಫ್ರಾಂಚೈಸಿಗಾಗಿ ಆಡಿರುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

    10 ವರ್ಷಗಳ ಅಂತರದಲ್ಲಿ ಒಂದೇ ಫ್ರಾಂಚೈಸ್‌ಗಾಗಿ ತಂದೆ ಮತ್ತು ಮಗ ಆಡುತ್ತಿದ್ದಾರೆ. ಇದು ಐಪಿಎಲ್‌ ಇತಿಹಾಸದಲ್ಲೇ ಮೊದಲು. ಅರ್ಜುನ್ ತೆಂಡೂಲ್ಕರ್​ಗೆ ಶುಭವಾಗಲಿ ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್)

    ಇದನ್ನೂ ಓದಿ: 19 ವರ್ಷದ ಬಿ.ಟೆಕ್ ವಿದ್ಯಾರ್ಥಿನಿಗೆ ಕಾಲೇಜು ಕೊಠಡಿಯಲ್ಲೇ ಗರ್ಭಪಾತ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts