ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ; ರಕ್ಷಣಾ ಕಾರ್ಯಾಚರಣೆಗೆ ತೊಡಕಾದ ದುರ್ಗಮ ಹಾದಿ

Army Copter
Published on

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಯುದ್ಧ ಹೆಲಿಕಾಪ್ಟರ್ ಸಿಯಾನ್ ಜಿಲ್ಲೆಯಲ್ಲಿ ಪತನಗೊಂಡಿದೆ. ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿಯಾನ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಚೇರಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಸಿಂಗಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತನವಾಗಿರುವ ಪ್ರದೇಶಕ್ಕೆ ರಸ್ತೆ ಸಂಪರ್ಕವಿಲ್ಲ. ದುರ್ಗಮ ಪ್ರದೇಶದಲ್ಲಿ ದುರಂತ ಸಂಭವಿಸಿದೆ ಎಂದು ಸಿಯಾನ್​ನ ಪೊಲೀಸ್ ಅಧೀಕ್ಷಕ ಜುಮ್ಮರ್ ಬಸರ್ ಹೇಳಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net