ಮಾನ್ವಿ: ಏಳನೇ ವೇತನ ಆಯೋಗದ ಅನುಷ್ಠಾನ, ಒಪಿಎಸ್ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀಶೈಲಗೌಡ ಆಗ್ರಹಿಸಿದರು.
ಬಲ್ಲಟಗಿಯಲ್ಲಿ ಶಾಸಕ ಹಂಪಯ್ಯ ನಾಯಕಗೆ ಭಾನುವಾರ ಮನವಿ ಸಲ್ಲಿಸಿ ಮಾತನಾಡಿದರು. ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿ ಮಾಡಬೇಕು. ತಾಲೂಕಿನಲ್ಲಿ ಗುರುಭವನ ನಿರ್ಮಿಸಬೇಕೆಂದು ಒತ್ತಾಯಿಸಿದರು.
ತಾಲೂಕು ಪ್ರಧಾನ ಕಾರ್ಯದರ್ಶಿ ಸುಪ್ರಿತ್ ನಾಯ್ಕ, ಖಜಾಂಚಿ ಯಂಕಯ್ಯ ಶೆಟ್ಟಿ, ಪ್ರಮುಖರಾದ ಶಿವಗ್ಯಾನಿ, ಸುರೇಶ, ಮಂಜುನಾಥ ಇದ್ದರು.