'ಜೊತೆ ಜೊತೆಯಲಿ' ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್ ಮಣಿಪಾಲ್ ಆಸ್ಪತ್ರೆಗೆ ದಾಖಲು

Arruru
Published on

ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಜೊತೆ ಜೊತೆಯಲಿ' ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದಾಗಿ ಕಳೆದ ಒಂದು ವಾರದಿಂದ ಮಣಿಪಾಲ್​​ನ ಕಸ್ತೂರಬಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಅವರ ಪತ್ನಿ, ಧಾರಾವಾಹಿ ನಿರ್ಮಾಪಕಿ ಸ್ಮೀತಾ ಜಗದೀಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಅಂಗಾಂಗ ಸಮಸ್ಯೆಯಿಂದಾಗಿ ಜಗದೀಶ್ ಕಳೆದೊಂದು ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳ, ಸ್ನೇಹಿತರ ಸಂದೇಶಗಳಿಗೆ ಪ್ರತಿಕ್ರಿಯಿಸಲು ಅವರಿಗೆ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಎಲ್ಲ ಆತ್ಮೀಯರಿಗೂ ಅವರ ಪರವಾಗಿ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net