More

    ಅಮರನಾಥ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು; 80 ಜನರ ರಕ್ಷಣೆಗಾಗಿ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

    ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತಾಗಿ ಸ್ಪಂದಿಸಿದ್ದಾರೆ. ಅಮರನಾಥದಲ್ಲಿ ಸಂಕಷ್ಟದಲ್ಲಿರುವ ಕರ್ನಾಟಕದ ಎಲ್ಲರೂ ಸುರಕ್ಷಿತವಾಗಿ ಮರಳಲು ಎಲ್ಲ ಅಗತ್ಯ ನೆರವನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ: ‘ಮೆದುಳು ತಿನ್ನುವ ಅಮೀಬಾ’ ಹತ್ತನೇ ತರಗತಿ ವಿದ್ಯಾರ್ಥಿಯ ಜೀವ ತೆಗೆಯಿತು!

    ಅಮರನಾಥ ಮಾರ್ಗದ ಮಧ್ಯದಲ್ಲಿ ಗುಡ್ಡ ಕುಸಿದು ಗದಗದ 23 ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗದಗ ಜಿಲ್ಲೆಯಿಂದ ನಾಲ್ಕು ದಿನಗಳ ಹಿಂದೆ ಅಮರನಾಥಕ್ಕೆ ತೆರಳಿದ್ದ ಇವರು ಅಲ್ಲಿನ ಭಾರಿ ಮಳೆಯಿಂದಾಗಿ ತೀವ್ರ ತೊಂದರೆಗೆ ಸಿಲುಕಿದ್ದು, ಅಲ್ಲಿನ ಪಂಚತರಣಿ ಕ್ಯಾಂಪ್​ನಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ. ಈ ಕುರಿತು ಅವರು ಗದಗ ಎಸ್​​ಪಿ ಬಿ.ಎಸ್. ನೇಮಗೌಡ ಅವರ ಗಮನಕ್ಕೆ ತಂದಿದ್ದರು.

    ಇದನ್ನೂ ಓದಿ: ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ

    ಗದಗದಿಂದ ತೆರಳಿರುವ 23 ಮಂದಿ ಮಾತ್ರವಲ್ಲದೆ ಕರ್ನಾಟಕದ ಒಟ್ಟು 80 ಮಂದಿ ಅಮರನಾಥ ಮಂದಿರದಿಂದ ಆರು ಕಿ.ಮೀ. ದೂರದಲ್ಲಿರುವ ಪಂಚತರಣಿ ಟೆಂಟ್​​ನಲ್ಲಿ ಆಶ್ರಯ ಪಡೆದಿದ್ದು, ತೀವ್ರ ಆತಂಕದಲ್ಲಿದ್ದಾರೆ. ಈ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಾಮಕುಮಾರ ಸ್ವಾಮೀಜಿಯ ಭೀಕರ ಕೊಲೆ; ತಲೆ ಇಬ್ಭಾಗ, ಕೈ-ಕಾಲುಗಳೂ ಕಟ್, ಶವ 9 ತುಂಡು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts