ಚನ್ನರಾಯಪಟ್ಟಣ: ನರ್ಸಿಂಗ್ ಕಾಲೇಜಿನ ತೃತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ವೈದ್ಯ ನರ್ಸಿಂಗ್ ಆ್ಯಂಡ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವೈ.ಎಸ್.ಅರ್ಪಿತಾ ರಾಜ್ಯಕ್ಕೆ ನಾಲ್ಕನೇ ಪಡೆಯುವ ಮೂಲಕ ತೇರ್ಗಡೆ ಹೊಂದಿ ಜಿಲ್ಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಕಸಬಾ ಹೋಬಳಿ ಯಾಚೇನಹಳ್ಳಿ ಗ್ರಾಮದ ಶಿವರಾಮು, ಮಮತಾ ದಂಪತಿ ಪುತ್ರಿ ವೈ.ಎಸ್.ಅರ್ಪಿತಾ ಕೊನೆಯ ವರ್ಷದ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆಯುವುದಲ್ಲದೆ, 2021-22ನೇ ಶೈಕ್ಷಣಿಕ ವರ್ಷದ ಎಲ್ಲ ವಿಷಯಗಳಲ್ಲಿನ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಹಂತದಲ್ಲಿ ತೇರ್ಗಡೆ ಹೊಂದಿದ್ದಾರೆ.
ಮೂರು ವರ್ಷಗಳೂ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಅವರು ಪಡೆದ ಅಂಕಗಳನ್ನು ಪರಿಗಣಿಸಿ ಮೈಸೂರು ವಲಯ ಮಟ್ಟದಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಗೆ ಪಟ್ಟಣದ ವೈದ್ಯ ನರ್ಸಿಂಗ್ ಆ್ಯಂಡ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಬಿ.ಎಲ್.ಅರುಣ್‌ಕುಮಾರ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
