ಅಲ್ಲಂಪುರ ಗ್ರಾಪಂಗೆ ಅರ್ಪಿತಾ ಅಧ್ಯಕ್ಷೆ

ಚಿಕ್ಕಮಗಳೂರು: ಅಲ್ಲಂಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ಅರ್ಪಿತಾ ಎ.ಎಂ.ಪ್ರಸನ್ನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅರ್ಪಿತಾ ಹೊರತುಪಡಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ರವೀಶ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಬಿಜೆಪಿ ಮುಖಂಡ ಟಿ.ರಾಜಶೇಖರ್ ಮಾತನಾಡಿ, ನೂತನ ಅಧ್ಯಕ್ಷರು ಗ್ರಾಪಂನ ಇತರೆ ಸದಸ್ಯರು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಹೆಚ್ಚು ಅನುದಾನ ತರಬೇಕು. ಈ ಮೂಲಕ ಸಮರ್ಪಕವಾಗಿ ಕಾಮಗಾರಿ ಅನುಷ್ಟಾನಗೊಳಿಸುವ ಮೂಲಕ ಗ್ರಾಪಂನ್ನು ಮಾದರಿಯಾಗಿಸಬೇಕು ಎಂದು ಹೇಳಿದರು.
ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್ ಮಾತನಾಡಿ, ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆ ವ್ಯಕ್ತಿಗೂ ತಲುಪುವಂತೆ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು, ಬೀದಿ ದೀಪ ಸಮಸ್ಯೆ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಎಲ್ಲ ಸದಸ್ಯರ ನಂಬಿಕೆ, ವಿಶ್ವಾಸದೊಂದಿಗೆ ಗ್ರಾಪಂನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಗ್ರಾಪಂ ನೂತನ ಅಧ್ಯಕ್ಷೆ ಅರ್ಪಿತಾ ಪ್ರಸನ್ನ ಮಾತನಾಡಿ, ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು. ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷರಾದ ಶಿವಕುಮಾರ್, ರಾಜೀವ್, ಕುರುವಂಗಿ ವೆಂಕಟೇಶ್, ತಾಪಂ ಮಾಜಿ ಅಧ್ಯಕ್ಷ ಕನಕರಾಜ್ ಅರಸ್, ಜಿಪಂ ಮಾಜಿ ಸದಸ್ಯ ಜೆ.ಡಿ.ಲೋಕೇಶ್, ಗ್ರಾಪಂ ಉಪಾಧ್ಯಕ್ಷ ಕೃಷ್ಣ, ಸದಸ್ಯರಾದ ಪೂರ್ಣಿಮಾ, ವಸಂತ್ ಕುಮಾರ್, ರಮೇಶ್, ದಾನೇಶ್, ಶಿವರಾಜು, ಜಯಂತಿ, ಪದ್ಮಾಕ್ಷಿ, ಕಮಲಾ, ಶಿಲ್ಪಾ, ಮಧುಸೂದನ್ ರಾವ್, ಮಾಜಿ ಅಧ್ಯಕ್ಷೆ ಗೌರಮ್ಮ, ದಾಸರಹಳ್ಳಿ ಗ್ರಾಪಂ ಅಧ್ಯಕ್ಷ ಸತೀಶ್‌ಪಾಪಣ್ಣ, ಪಿಡಿಒ ಮಂಜುನಾಥ್, ಕಾರ್ಯದರ್ಶಿ ರಾಜಶೇಖರ್ ಮತ್ತಿತರರಿದ್ದರು.

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…