More

    ಗೃಹಲಕ್ಷ್ಮೀ ಸಮಾರಂಭ ವೀಕ್ಷಣೆಗೆ ವ್ಯವಸ್ಥೆ

    ಶಿಗ್ಗಾಂವಿ: ಗೃಹಲಕ್ಷ್ಮೀ ಯೋಜನೆ ಮೂಲಕ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಅಧಿಕೃತವಾಗಿ ಬಿಡುಗಡೆಗೊಳಿಸುವ ಸರ್ಕಾರದ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಪಟ್ಟಣ ಸೇರಿದಂತೆ ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಸಲುವಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ. ಯೋಜನೆಗೆ ನೊಂದಣಿಯಾದ ಅರ್ಹ ಫಲಾನುಭವಿ ಖಾತೆಗೆ 2 ಸಾವಿರ ರೂಪಾಯಿ ಅನ್ನು ನೇರ ನಗದು ವ್ಯವಸ್ಥೆ (ಡಿಬಿಟಿ) ಮೂಲಕ ವರ್ಗಾವಣೆಗೆ ಆ. 30ರಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದರು.

    ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಫಲಾನುಭವಿಗಳ ಭಾಗವಹಿಸಲು ಅನುವಾಗುವಂತೆ ಏಕಕಾಲದಲ್ಲಿ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೇರ ಪ್ರಸಾರದ ವ್ಯವಸ್ಥೆಗೆ ಉದ್ದೇಶಿಸಲಾಗಿದೆ. ಶಿಗ್ಗಾಂವ ಪುರಸಭೆ ವ್ಯಾಪ್ತಿಯಲ್ಲಿ ಮೂರು ಹಾಗೂ ಬಂಕಾಪೂರ ಪುರಸಭೆ ವ್ಯಾಪ್ತಿಯಲ್ಲಿ ಮೂರು ಹಾಗೂ ತಾಲೂಕಿನ 28 ಗಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಕಾರ್ಯಕ್ರಮದ ಸ್ಥಳದಲ್ಲಿ ಒಂದು ಟಿ.ಪಿ. ಪ್ರೊಜೆಕ್ಟರ್, ಎಲ್ಇಡಿ ಪರದೆ ವ್ಯವಸ್ಥೆಗೊಳಿಸಲಾಗಿದೆ. ಕಾರ್ಯಕ್ರಮದಲ್ಲಿ ಯೋಜನೆ ಫಲಾನುಭವಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

    ತಾಪಂ ಇಒ ಪಿ. ವಿಶ್ವನಾಥ, ಸಿಡಿಪಿಒ ಗಣೇಶ ಲಿಂಗನಗೌಡ್ರ, ಪುರಸಭೆ ಮುಖ್ಯ ಅಧಿಕಾರಿ ಸಂಗನಬಸಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts