ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅಂದರ್​

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಯುವಕನೊಬ್ಬ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಸೋಹೆಲ್(29) ಎಂಬಾತ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾನೆ. ಈತನಿಗೆ ಎರಡು ಮದುವೆಯಾಗಿರುವುದು ತಿಳಿದು ಬಂದಿದೆ.

ವಿದ್ಯಾರಣ್ಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)