ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

Crime Logo
Published on

ಮುಂಡಗೋಡ: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ವ ಜಲಾಶಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದವನ ಮೇಲೆ ಶನಿವಾರ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ.


ಹಾನಗಲ್ಲ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ (24) ಬಂಧಿತ.


ದಾಸನಕೊಪ್ಪ ರಸ್ತೆಯ ಧರ್ವ ಜಲಾಶಯ ಹತ್ತಿರ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ. 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಪಿಐ ಬಿ.ಎಸ್. ಲೋಕಾಪುರ ನಿರ್ದೇಶನದಂತೆ ಪಿಎಸ್​ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಸಿಬ್ಬಂದಿ ಗಣಪತಿ ಹೊನ್ನಳ್ಳಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬಡಗೇರ, ಬಸವರಾಜ ಲಮಾಣಿ, ಸಂಜು ರಾಠೋಡ ಗುರುರಾಜ ಬಿ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net