

ಕುಂದಾಪುರ: ಕಾವ್ರಾಡಿ ಗ್ರಾಮದ ಮರಾಸಿ ರಸ್ತೆಯಲ್ಲಿ ಹಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಆಟವಾಡುತ್ತಿದ್ದ ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕ ನಾಸಿರ್ ಹುಸೇನ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು. ದೇವಲ್ಕುಂದ ಗ್ರಾಮದ ಅನಿಲ್ (31), ಯೋಗೀಶ್ (39) ಮತ್ತು ಪೂರ್ಣೇಶ (25), ಕೆಂಚನೂರು ಗ್ರಾಮದ ರಘು (39) ಎಂಬುವರನ್ನು ಬಂಧಿಸಿ, ಆಟಕ್ಕೆ ಬಳಸಿದ್ದ 2,480 ರೂ. ನಗದು, ಎರಡು ಮೊಬೈಲ್ ಮತ್ತು ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.