More

    ಸರಗಳ್ಳನ ಬಂಧನ

    ಮದ್ದೂರು: ಮಹಾರಾಷ್ಟ್ರ ಹಾಗೂ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಹಾಗೂ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಸರಗಳ್ಳನನ್ನು ಮದ್ದೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬೀದರ್ ಮೂಲದ ಜಾವೀದ್ ಬಾಲಿ ಜಾಫ್ರಿ ಬಂಧಿತ ಸರಗಳ್ಳನಾಗಿದ್ದು, ಈತನಿಂದ ಒಟ್ಟು 435 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈತ ಕಳೆದ ತಿಂಗಳು ಪಟ್ಟಣದ ಎಸ್.ಬಿ.ಎಂ. ರಸ್ತೆಯ ನಿವಾಸಿ, 75 ವರ್ಷದ ವೃದ್ಧೆ ಕೆಂಪಮ್ಮ ಅವರ ಕೊರಳಲ್ಲಿದ್ದ 62 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ.

    ತಾಲೂಕಿನ ಬೆಸಗರಹಳ್ಳಿ, ಕೆ.ಎಂ.ದೊಡ್ಡಿ, ಮಂಡ್ಯದ ಶಿವಳ್ಳಿ, ಬಸರಾಳು, ಪಶ್ಚಿಮ ಪೊಲೀಸ್ ಠಾಣೆ ಸೇರಿದಂತೆ ರಾಮನಗರ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲೂ ಮಹಿಳೆಯರಿಂದ ಸರಗಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ಗಮನ ಬೇರೆಡೆ ಸೆಳೆದು ವಂಚಿಸುವ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

    ಡಿವೈಎಸ್‌ಪಿ ಕೃಷ್ಣಪ್ಪ ಮಾರ್ಗದರ್ಶನದಲ್ಲಿ ಮದ್ದೂರು ಗ್ರಾಮಾಂತರ ಸಿಪಿಐ ವೆಂಕಟೇಗೌಡ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು.

    ಪ್ರಶಂಸೆ: ಮದ್ದೂರು ವೃತ್ತ ಹಾಗೂ ಮದ್ದೂರು ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts