ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಗ್ರಾಮದ ಅಗ್ರಹಾರ ಬೀದಿಯಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ನಿವಾಸಿಗಳಾದ ಸುಂದ್ರಮ್ಮ, ಮಹೇಂದ್ರ ಕುಮಾರ್ ಬಂಧಿತರು. ಈಕೆ ಮದ್ಯ ಅಕ್ರಮ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸುಪ್ರೀತ್ ಹಾಗೂ ತಂಡ ದಾಳಿ ನಡೆಸಿ 90 ಎಂಎಲ್ ಸಾಮರ್ಥ್ಯದ 50 ಪೌಚ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಸಂತೋಷ್ ಪವರ್, ದುಂಡು ಪೂಜಾರಿ, ಭಾರ್ಗವಿ ಇದ್ದರು.