More

  ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

  ಹುಬ್ಬಳ್ಳಿ: ಇಲ್ಲಿಯ ರೈಲ್ವೆ ನಿಲ್ದಾಣ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
  ಹುಕ್ಕೇರಿ ಮೂಲದ ಸೈಫ್ ಅಲಿ ಸುತಾರ (28) ಬಂಧಿತ. ಬಂಧಿತನಿಂದ 5,04,500 ರೂ. ಮೌಲ್ಯದ 5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ದಾಳಿ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದೆ.
  ಬಂಧನ: ಇಲ್ಲಿಯ ಗದಗ ರಸ್ತೆಯ ಚಾಲುಕ್ಯ ಹಾಲ್ ಹತ್ತಿರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚೇತನಾ ಕಾಲನಿಯ ಸಂದೀಪ ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ 69,800 ರೂ. ಮೌಲ್ಯದ 690 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts